
ಮಡಿಕೇರಿ ಜು.27 NEWS DESK : ಭಾರಿ ಗಾಳಿ ಮಳೆಯಿಂದಾಗಿ ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಶಾಲೆಯ ಹಿಂಭಾಗದ ಹೆಚ್.ಆರ್.ಹೇಮವತಿ ಎಂಬುವವರ ಮನೆ ಮೇಲೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ.
ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಜಾನ್ಸನ್ ಪಿಂಟೋ ಹಾಗೂ ತಹಶೀಲ್ದಾರ್ ಪ್ರವೀಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭ ಕುಟುಂಬದವರಿಗೆ ಆಹಾರ ಕಿಟ್ ವಿತರಿಸಲಾಯಿತು.









