ಮಡಿಕೇರಿ ಜು.29 NEWS DESK : ಕೊಡಗು ಜಿಲ್ಲಾ ಉಪ ವಿಭಾಗಾಧಿಕಾರಿಗಳ ಕಚೇರಿಯ ಪ್ರಥಮ ದರ್ಜೆ ಸಹಾಯಕ ಅರುಣ ಅವರ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಜು.24 ರಂದು ಕುಶಾಲನಗರದ ಕೊಪ್ಪ ಸೇತುವೆ ಬಳಿ ಅರುಣ (52) ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಉಪ ವಿಭಾಗಾಧಿಕಾರಿಗಳ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅರುಣ ಅವರು ಮಧ್ಯಾಹ್ನದ ನಂತರ ಕೊಪ್ಪಕ್ಕೆ ಬಂದು ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿತ್ತು.
ಕಳೆದ ನಾಲ್ಕು ವರ್ಷಗಳಿಂದ ಮಡಿಕೇರಿಯ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಕುಶಾಲನಗರದಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್, ನುರಿತ ಈಜು ತಜ್ಞರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿದರು.