ಮಡಿಕೇರಿ NEWS DESK ಜು.29 : ವಾಯುಸೇನೆಯ ನಿವೃತ್ತ ಅಧಿಕಾರಿ, ಮಡಿಕೇರಿ ನಗರದ ರೇಸ್ ಕೋರ್ಸ್ ರಸ್ತೆಯ ನಿವಾಸಿ ಬೈತಡ್ಕ ಬೆಳ್ಳಿಯಪ್ಪ (81) ಅವರು ನಿಧನ ಹೊಂದಿದ್ದಾರೆ. ಹಾವು ಕಡಿತಕ್ಕೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗೆಂದು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಾಲುಜಾರಿ ಬಿದ್ದಿದ್ದರು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ ಬೆಳ್ಳಿಯಪ್ಪ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರು ಹಿರಿಯ ಸಾಹಿತಿ ಬೈತಡ್ಕ ಜಾನಕಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಬೈತಡ್ಕ ಬೆಳ್ಳಿಯಪ್ಪ ಅವರು ಸೇನಾ ಸೇವೆಯ ನಂತರ ಜೀವವಿಮಾ ನಿಗಮದಲ್ಲೂ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.










