ಮಡಿಕೇರಿ NEWS DESK ಜು.29 : ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯವನ್ನು ಕೊಡವಲ್ಯಾಂಡ್ ನಿಂದಲೇ ಸ್ಥಾನಪಲ್ಲಟಗೊಳಿಸುವ ದುರುದ್ದೇಶದಿಂದ ಕೊಡವರನ್ನು ನಿತ್ಯ ಶೋಷಣೆಗೆ ಒಳಪಡಿಸಲಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ ಸಿಎನ್‌ಸಿ ವತಿಯಿಂದ ನಡೆದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಭೂಮಾಫಿಯಾ, ಕಾರ್ಪೋರೇಟ್ ಮಾಫಿಯಾ, ರಾಜಕೀಯ ನಂಟು ಹೊಂದಿರುವ ಆರ್ಥಿಕ ಅಪರಾಧಿಗಳು ಸೇರಿದಂತೆ ದೇಶ ವಿದೇಶದ ಬಂಡವಾಳಶಾಹಿ ವರ್ಗ ಪವಿತ್ರ ಕಾವೇರಿ ನದಿ ಹುಟ್ಟುವ ಕೊಡವ ಭೂಮಿಯ ಎಲ್ಲಾ ಸಂಪನ್ಮೂಲಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಅನುಭವಿಸುತ್ತಿದ್ದಾರೆ. ಆದರೆ ಕೊಡವರು ಕಾವೇರಿ ನೀರನ್ನು ಕೂಡ ಬಳಸಲು ಅನರ್ಹರು ಎನ್ನುವ ರೀತಿ ಆಡಳಿತ ವ್ಯವಸ್ಥೆ ಶೋಷಣೆ ಮಾಡುತ್ತಿದೆ. ಕೊಡಗನ್ನು ತಮ್ಮ ಆಕ್ರಮಿತ ವಸಾಹತು ಎಂದು, ಕೊಡವರು ಆ ವಸಾಹತಿನ ಅಧೀನ ಪ್ರಜೆಗಳೆಂದು ಕರ್ನಾಟಕ ಸರ್ಕಾರ ಪರಿಗಣಿಸಿದಂತ್ತಿದೆ. ಕೊಡವರನ್ನು ಯಾವುದೋ ವಸಾಹತು ನಿವಾಸಿಗಳೆಂದು ಪರಿಗಣಸಿ ಹಕ್ಕುಗಳನ್ನು ಕಸಿದುಕೊಂಡು ಕೊಡವ ಲ್ಯಾಂಡ್ ನಿಂದಲೇ ದೂರ ಮಾಡಲು ಷಡ್ಯಂತ್ರಗಳು ನಡೆಯುತ್ತಿದೆ ಎಂದು ಆರೋಪಿಸಿದರು.
ದೇಶದ ಆರ್ಥಿಕ ವ್ಯವಸ್ಥೆಯನ್ನು ಬಲಗೊಳಿಸಲು ಪ್ರಮುಖ ಪಾತ್ರ ವಹಿಸಿರುವ ಕಾಫಿಯ ಕೃಷಿಗಾಗಿ ವಾರ್ಷಿಕ ಕೇವಲ 15 ದಿನಗಳ ಮಟ್ಟಿಗೆ ಕೊಡಗಿನ ಬೆಳೆಗಾರರು ಕಾವೇರಿ ನೀರನ್ನು ಬಳಸಲು ಮುಂದಾದರೆ ಅದಕ್ಕೆ ಇಲ್ಲಸಲ್ಲದ ನಿಯಮಗಳನ್ನು ರೂಪಿಸಿ ಅಡ್ಡಿಪಡಿಸಲಾಗುತ್ತಿದೆ. ಆದರೆ ದಕ್ಷಿಣ ಕೊಡಗು ಭಾಗದಲ್ಲಿರುವ ಬಂಡವಾಳಶಾಹಿಗಳ ಸಾವಿರಾರು ಎಕರೆ ‘ಟೀ ತೋಟ’ಗಳಿಗೆ ವರ್ಷದ 365 ದಿನವೂ ನೀರನ್ನು ಬಳಸಿದರೆ ಅದಕ್ಕೆ ಅಡ್ಡಿಪಡಿಸುವ ಯಾವುದೇ ನಿಯಮಗಳು ಜಾರಿಯಾಗುವುದಿಲ್ಲ. ಕೇವಲ ಆದಿಮಸಂಜಾತ ಕೊಡವರ ಮೇಲೆ ನಿಯಮಗಳನ್ನು ಹೇರಿ ನಮ್ಮ ಹಕ್ಕಾದ ಕಾವೇರಿ ನೀರನ್ನು ಬಳಸದಂತೆ ಮಾಡಲಾಗುತ್ತಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ತಲಕಾವೇರಿಯಿಂದ ತಮಿಳುನಾಡಿನ ಪೂಂಪ್ ಹಾರ್ ವರೆಗೆ 740 ಟಿಎಂಸಿಯಷ್ಟು ನೀರು ಹರಿದು ಹೋಗುತ್ತದೆ. ಇದರಲ್ಲಿ 200 ಟಿಎಂಸಿ ನೀರು ಕೊಡಗು ಪ್ರದೇಶದ ಕೊಡುಗೆಯಾಗಿದೆ. ಇದಕ್ಕೆ ರಾಯಲ್ಟಿ ನೀಡಿ ಕೊಡವರನ್ನು ಸಂರಕ್ಷಿಸಬೇಕಾದ ಸರ್ಕಾರ ಬೊಗಸೆ ನೀರು ಪಡೆಯವುದಕ್ಕೂ ಅನುಮತಿ ಪಡೆಯಬೇಕು ಎನ್ನುವ ಪರಿಸ್ಥಿತಿಯನ್ನು ತಂದೊಡ್ಡಿದೆ. ಅತ್ಯಂತ ಸಣ್ಣ ಸಮುದಾಯ ಕೊಡವರಿಗೆ ಇರುವ ಏಕೈಕ ಪವಿತ್ರ ಕೇತ್ರ ತಲಕಾವೇರಿ. ಇಲ್ಲಿ ಸಮುದಾಯ ಭವನ ನಿರ್ಮಿಸಲು ಮುಂದಾದ ಕೊಡವ ಟ್ರಸ್ಟ್ ಗೆ ಭೂಪರಿವರ್ತನೆಗೆ ಅನುಮತಿ ನೀಡದೆ ಅನ್ಯಾಯ ಮಾಡಲಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಭೂಪರಿವರ್ತನೆ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ಅಧಿಕಾರಿ ವರ್ಗ ನುಣುಚಿಕೊಳ್ಳುತ್ತಿದೆ. ಆದರೆ ಸಿಎನ್‌ಸಿ ನಡೆಸುತ್ತಿರುವ ಹೋರಾಟ ಬೃಹತ್ ಭೂಪರಿವರ್ತನೆ, ಭೂವಿಲೇವಾರಿಯ ವಿರುದ್ಧ ಮತ್ತು ಕೊಡವರ ಹಕ್ಕುಗಳನ್ನು ಪ್ರತಿಪಾದಿಸುವುದೇ ಹೊರತು ಸಮುದಾಯ ಭವನದಂತಹ ಯೋಜನೆಗಳಿಗೆ ನಮ್ಮ ವಿರೋಧವಿಲ್ಲವೆಂದು ಎನ್.ಯು.ನಾಚಪ್ಪ ಸ್ಪಷ್ಟಪಡಿಸಿದರು. ಪವಿತ್ರ ಕಾವೇರಿ ನದಿ ಮತ್ತು ಕೊಡವ ಜನ್ಮಭೂಮಿಯ ನಡುವೆ ಅವಿನಾಭಾವ ಸಂಬAಧವಿದೆ. ಭೂಮಾಪಿಯಾಗಳಿಂದ ಕೊಡವಲ್ಯಾಂಡ್ ನ್ನು ಸಂರಕ್ಷಿಸಿಕೊಳ್ಳುವುದು ನಮ್ಮ ಹೋರಾಟದ ಉದ್ದೇಶವಾಗಿದೆ. ಇದಕ್ಕೆ ಸರ್ವ ಕೊಡವರು ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಭಾಗಮಂಡಲದಲ್ಲಿ ಕೊಡವ ಟ್ರಸ್ಟ್ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನದ ಕಾಮಗಾರಿಗೆ ಭೂಪರಿವರ್ತನೆ ಮಾಡಲು ಜಿಲ್ಲಾಡಳಿತ ಅವಕಾಶ ನೀಡಿಲ್ಲ. ಆದರೆ ಭೂಮಾಫಿಯಾ ಮತ್ತು ಕಾರ್ಪೋರೇಟ್ ವಲಯಗಳಿಗೆ ಯಾವುದೇ ವಿಳಂಬ ಮಾಡದೆ ಒತ್ತಡಕ್ಕೆ ಮಣಿದು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಡಿಕೊಡಲಾಗುತ್ತಿದೆ. ತಲಕಾವೇರಿ, ಭಾಗಮಂಡಲ ಕೊಡವ ಟ್ರಸ್ಟ್ ಅವರಿಗೆ ಸಮುದಾಯ ಭವನ ನಿರ್ಮಾಣ ಮಾಡಲು ಅವಕಾಶ ನಿರಾಕರಣೆ ಮಾಡಿರುವುದು ಸಂವಿಧಾನದ 51 ಎ ಮತ್ತು 25, 26 ವಿಧಿಯ ಉಲ್ಲಂಘನೆಯಾಗಿದೆ. ಅತ್ಯಂತ ಸಣ್ಣ ಸಮುದಾಯವೊಂದು ಧಾರ್ಮಿಕ ಆಚಾರ, ವಿಚಾರಗಳನ್ನು ಮುಕ್ತವಾಗಿ ಆಚರಣೆ ಮಾಡಲು ಅಡ್ಡಿಪಡಿಸಿದಂತ್ತಾಗಿದೆ. ಕೊಡವರು ತಮ್ಮ ಜನ್ಮಭೂಮಿಯಲ್ಲಿ ನ್ಯಾಯಸಮ್ಮತವಾಗಿ ಮನೆ ನಿರ್ಮಿಸಲು ಭೂಪರಿವರ್ತನೆಗೆ ಅರ್ಜಿ ಸಲ್ಲಿಸಿದರೆ ಇಲ್ಲಸಲ್ಲದ ನಿಯಮಗಳನ್ನು ರೂಪಿಸಿ ಕಿರುಕುಳ ನೀಡಲಾಗುತ್ತಿದೆ.
ಕೊಡಗು ಜಿಲ್ಲೆಯಲ್ಲೂ ಆಂಧ್ರದ ಹಣ ಬಳಕೆಯಾಗುತ್ತಿದ್ದು, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಾಗುತ್ತಿದೆ. ಬೆಂಗಳೂರು, ತಿರುವನಂತಪುರ, ಚೆನ್ನೆöÊ, ಹೈದರಬಾದ್ ಸೇರಿದಂತೆ ದೇಶದ ವಿವಿಧೆಡೆಯ ಭೂಮಾಫಿಯ ಮತ್ತು ರಾಜಕೀಯ ಸಂಯೋಜಿತ ಗುಂಪುಗಳು ಈ ಕಾರ್ಯದಲ್ಲಿ ತೊಡಗಿವೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮೂಲಕ ರೆಸಾರ್ಟ್ಗಳು, ದೈತ್ಯಾಕಾರದ ವಿಲ್ಲಾಗಳು, ಲೇಔಟ್ ಗಳು, ಮನೆಗಳು ಟೌನ್ ಶಿಪ್ ಗಳು, ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಸೇರಿದಂತೆ ವಾಣಜ್ಯ ಉದ್ದೇಶದ ಯೋಜನೆಗಳು ತಯಾರಾಗುತ್ತಿದೆ. ಇದು ಪವಿತ್ರ ಕೊಡವ ಲ್ಯಾಂಡ್ ನ ನಾಶಕ್ಕೆ ಕಾರಣವಾಗಬಹುದು. ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದರು.
ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ವಾಣಿಜ್ಯ ದುರುದ್ದೇಶಕ್ಕಾಗಿ ಆದಿಮಸಂಜಾತ ಕೊಡವರ ಪವಿತ್ರ ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಕಪ್ಪು ಹಣ ಚಲಾವಣೆಯಾಗುತ್ತಿದೆ. ವಿಶ್ವದಾದ್ಯಂತ ಇರುವ ಆರ್ಥಿಕ ಅಪರಾಧಿಗಳು, ಕಾಳಸಂತೆಕೋರರು ಹಾಗೂ ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ಕಪ್ಪು ಹಣವನ್ನು ಬಿಳಿ ಮಾಡಲು ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಡಗಿನಲ್ಲಿ ರೆಸಾರ್ಟ್ ವ್ಯವಹಾರ ದೊಡ್ಡ ಮಟ್ಟದಲ್ಲಿ ನಡೆಯದಿದ್ದರೂ ಕಾಫಿ ತೋಟಗಳ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಮಾಡಲಾಗುತ್ತಿದೆ. ನಷ್ಟ ತೋರಿಸುವುದಕ್ಕಾಗಿ ರೆಸಾರ್ಟ್ಗಳನ್ನು ನಿರ್ಮಿಸುತ್ತಿದ್ದು, ಕಪ್ಪು ಹಣವನ್ನು ಚಲಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಭೂಮಾಫಿಯಾಗಳು ಹಾಗೂ ರಾಜಕೀಯ ಬೆಂಬಲಿತರು ಕೊಡಗಿನ ಕಾವೇರಿ ಜಲಾನಯನ ಪ್ರದೇಶದ ಭೂಮಿಗಳನ್ನು ದೊಡ್ಡ ಮಟ್ಟದಲ್ಲಿ ಖರೀದಿಸುತ್ತಿದ್ದು, ಕಪ್ಪು ಹಣದ ಚಲಾವಣೆಯಾಗುತ್ತಿದೆ. ಬೃಹತ್ ಕಾಫಿ ತೋಟಗಳ ಖರೀದಿಯ ನಂತರ ಅಕ್ಕಪಕ್ಕದ ಸಣ್ಣ ಹಿಡುವಳಿದಾರರ ಭೂಮಿಯನ್ನು ಹಣದ ಆಮಿಷವೊಡ್ಡಿ ಕಬಳಿಸಲಾಗುತ್ತಿದೆ. ಆದಾಯ ಕ್ರೋಢೀಕರಣಕ್ಕಾಗಿ ಸರ್ಕಾರ ಪ್ರವಾಸೋದ್ಯಮದ ಹೆಸರಿನಲ್ಲಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಂತಹ ಪ್ರಕೃತಿಗೆ ವಿರುದ್ಧವಾದ ಪ್ರಕ್ರಿಯೆಗಳಿಗೆ ಅವಕಾಶ ಹಾಗೂ ಅನುಕೂಲ ಕಲ್ಪಿಸುತ್ತಿದೆ. ಇದರ ಪರಿಣಾಮ ಪ್ರವಾಸಿಗರಿಂದಾಗಿ ಮೂಲನಿವಾಸಿಗಳಿಗೆ ರಕ್ಷಣೆ ಮತ್ತು ನೆಮ್ಮದಿ ಇಲ್ಲದಾಗಿದೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮೂಲಕ ರೆಸಾರ್ಟ್ಗಳು, ದೈತ್ಯಾಕಾರದ ವಿಲ್ಲಾಗಳು, ಲೇಔಟ್ ಗಳು, ಮನೆಗಳು ಟೌನ್ ಶಿಪ್ ಗಳು, ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಸೇರಿದಂತೆ ವಾಣಜ್ಯ ಉದ್ದೇಶದ ಯೋಜನೆಗಳು ತಯಾರಾಗುತ್ತಿದೆ ಎಂದು ಆರೋಪಿಸಿದರು.
ಸರ್ಕಾರಗಳು ಡಾ.ಸ್ವಾಮಿನಾಥನ್ ಸಮಿತಿಯ ವರದಿಯನ್ನು ಉಲ್ಲಂಘಿಸಿವೆ. ಸ್ವಾಮಿನಾಥನ್ ತಮ್ಮ ವರದಿಯಲ್ಲಿ ಕೃಷಿಭೂಮಿಯನ್ನು ಹಾಗೆಯೇ ಉಳಿಸಿಕೊಳ್ಳಲು ಶಿಫಾರಸ್ಸು ಮಾಡಿದ್ದಾರೆ. ಲಭ್ಯವಿರುವ ಕೃಷಿಭೂಮಿಯ ಪ್ರಮಾಣ ಕಡಿಮೆಯಾದಂತೆ ಗ್ರಾಹಕರಿಗೆ ಲಭ್ಯವಿರುವ ಆಹಾರದ ಗುಣಮಟ್ಟ ಕಡಿಮೆಯಾಗುತ್ತದೆ. ಇದು ಆರ್ಥಿಕತೆಗೆ ಮಾತ್ರವಲ್ಲದೆ ಆರೋಗ್ಯದ ಮೇಲೆ ಹಾನಿ ಮಾಡುತ್ತದೆ. ಆರ್ಟಿಕಲ್ 51(ಎ), 51ಎ (ಎಫ್) – ನಮ್ಮ ಸಂಸ್ಕೃತಿಯ ಶ್ರೀಮಂತ ಪರಂಪರೆಯನ್ನು ಮೌಲ್ಯೀಕರಿಸಲು ಮತ್ತು ಸಂರಕ್ಷಿಸಲು, 51ಎ(ಜಿ)-ಕಾಡುಗಳು, ಸರೋವರಗಳು, ನದಿಗಳು ಮತ್ತು ವನ್ಯಜೀವಿಗಳನ್ನು ಒಳಗೊಂಡAತೆ ನೈಸರ್ಗಿಕ ಆರ್ಥಿಕತೆಯನ್ನು ಮೌಲ್ಯೀಕರಿಸಲು, ರಕ್ಷಿಸಲು, ಸುಧಾರಿಸಲು ಮತ್ತು ಜೀವಂತ ಜೀವಿಗಳ ಬಗ್ಗೆ ಸಹಾನುಭೂತಿ ಹೊಂದಲು, 51ಎ(ಎನ್)-ವೈಜ್ಞಾನಿಕ ಮನೋಭಾವ, ಮಾನವತಾವಾದ, ವಿಚಾರಣೆ ಮತ್ತು ಸುಧಾರಣೆಯ ಮನೋಭಾವವನ್ನು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ. ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ 79ಎ ಮತ್ತು 79ಬಿಯನ್ನು ದುರ್ಲಾಭಪಡಿಸಿಕೊಂಡು ಕೃಷಿ ಜಮೀನು, ಭತ್ತದ ಗದ್ದೆಗಳು ಮತ್ತು ಕಾಫಿ ತೋಟಗಳನ್ನು ಪರಿವರ್ತನೆ ಮಾಡಲಾಗುತ್ತಿದೆ. ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವುದು ಅಗತ್ಯವೆಂದು ತಿಳಿಸಿದರು.
ನಮ್ಮ ಅನುವಂಶಿಕ ಭೂಮಿಯನ್ನು ಉಳಿಸಿಕೊಳ್ಳಲು, ಮಾತೃಭೂಮಿ, ಶಾಶ್ವತವಾದ ದೀರ್ಘಕಾಲಿಕ ಜಲಸಂಪನ್ಮೂಲಗಳು, ನಯನ ಮನೋಹರ ಪರಿಸರ, ಭೂಗೋಳವನ್ನು ನೈಸರ್ಗಿಕವಾಗಿ ವಿಹಂಗಮ ಪರ್ವತಗಳು, ಬೆಟ್ಟಗಳು, ನಿತ್ಯಹರಿದ್ವರ್ಣದ ಸಸ್ಯ ಮತ್ತು ಪ್ರಾಣಿ ಸಂಕುಲಗಳು ಜೈವಿಕ ವೈವಿಧ್ಯತೆ, ಕೊಡವ ಬುಡಕಟ್ಟು ಜನಾಂಗದ ಶ್ರೀಮಂತ ಜಾನಪದ ಪರಂಪರೆ ಮತ್ತು ಭೂಮಿಯೊಂದಿಗೆ ಬೆಸೆದುಕೊಂಡಿರುವ ಕೊಡವರ ಯೋಧರ ಪರಂಪರೆಯನ್ನು ಉಳಿಸಿಕೊಳ್ಳಬೇಕಾಗಿದೆ. ಈ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಗಾಗಿ ಸ್ವಯಂ-ಆಡಳಿತವನ್ನು ಸಂವಿಧಾನದ ವಿಧಿ 244, 371 ಆರ್/ಡಬ್ಲ್ಯೂ 6 ಮತ್ತು 8ನೇ ಶೆಡ್ಯೂಲ್ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕುಗಳು ವಿಶ್ವರಾಷ್ಟç ಸಂಸ್ಥೆ ಹೊರಡಿಸಿರುವ ಆದಿಮಸಂಜಾತ ಜನಾಂಗದ ಹಕ್ಕುಗಳ ಅಂತರಾಷ್ಟ್ರೀಯ ಕಾನೂನಿನಂತೆ ಜಾರಿಯಾಗುವ ಅಗತ್ಯವಿದೆ ಎಂದರು.
ಇದಕ್ಕಾಗಿ ವ್ಯಾಪಕ ಜನಜಾಗೃತಿ ಅಗತ್ಯವಾಗಿದ್ದು, ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜಿಸಲಾಗುವುದು ಎಂದು ನಾಚಪ್ಪ ಹೇಳಿದರು. ಜನಜಾಗೃತಿ ಕಾರ್ಯಕ್ರಮದಲ್ಲಿ ಬೊಟ್ಟಂಗಡ ಸವಿತಾ, ಅಜ್ಜಮಾಡ ಸಾವಿತ್ರಿ, ಕಟ್ಟೇರ ಗ್ರೇಸಿ ಉದಯ, ಕಿರಿಯಮಾಡ ಗ್ರೇಸಿ ಶೆರೀನ್, ಬಲ್ಲಡಿಚಂಡ ಬೇಬಿ ಮೇದಪ್ಪ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಕುಂಞಗAಡ ನಮೃತಾ, ಪೊಕ್ಳೊಂಗಡ ಡೀನಾ, ಅಪ್ಪಚಂಗಡ ಮೋಟಯ್ಯ, ಚೊಟ್ಟೆಯಂಡಮಾಡ ಉದಯ, ಮಚ್ಚಮಾಡ ಸುಮಂತ್, ಕಟ್ಟೇರ ಉದಯ, ಕಾಯಪಂಡ ಕಾವೇರಪ್ಪ, ಚಟ್ಟಂಗಡ ಸಜನ್ ಸೋಮಣ್ಣ, ಬೊಟ್ಟಂಗಡ ಗಿರೀಶ್ ಬಾಚರಣಿಯಂಡ ಚಿಪ್ಪಣ್ಣ, ಅಜ್ಜಿಕುಟ್ಟಿರ ಲೋಕೇಶ್, ಕಿರಿಯಮಾಡ ಶೆರಿನ್, ಅಪ್ಪೆಂಗಡ ಮಾಲೆ, ಮಾಣೀರ ರಮೇಶ್, ಮಾಣೀರ ಪ್ರವೀಣ್, ಚಿಮ್ಮಣೀರ ಕಾರ್ಯಪ್ಪ, ಚಟ್ಟಂಗಡ ನಂಜಪ್ಪ, ಮಚ್ಚಮಾಡ ನಂದಾ, ಮುಂಡAಡ ಬಬ್ಬು, ಚಟ್ಟಂಗಡ ಆದರ್ಶ್, ಮಿದೇರೀರ ಸೋಮಯ್ಯ, ಪೊನ್ನಕಚ್ಚಿರ ಧನು, ನೂರೇರ ವಿಜಯ್, ಕೊದೆಂಗಡ ಬೋಪಯ್ಯ, ಕಾಳಿಮಾಡ ಕಿರಣ್, ಕುಂಞAಗಡ ನೆಹರು, ಚಟ್ಟಂಡ ಅಪ್ಪಣ್ಣ, ಚೊಟ್ಟೆಯಂಡಮಾಡ ಪೂಣಚ್ಚ, ಬೊಳ್ಳೇರ ಬೊಳ್ಯಪ್ಪ, ಬೊಟ್ಟಂಗಡ ಡಾಲಿ, ಚೊಟ್ಟೆಯಂಡಮಾಡ ಮೊಣ್ಣಪ್ಪ, ಮುಕ್ಕಾಟಿರ ಸುಬ್ಬಯ್ಯ, ಪೊಕ್ಳೊಂಗಡ ಕಾಶಿ, ಮಾಯಣಮಾಡ ತಿಮ್ಮಯ್ಯ, ಬಾಚಿರ ಸೋಮಣ್ಣ, ದೇಕಮಾಡ ಪೂಣಚ್ಚ, ಬೊಟ್ಟಂಗಡ ಚಿನ್ನಪ್ಪ, ಚೊಟ್ಟೆಯಂಡಮಾಡ ಗಣೇಶ್, ಪೆಮ್ಮಣಮಾಡ ಚೆಂಗಪ್ಪ, ಮುಕ್ಕಾಟಿರ ಪ್ರಭು, ಮಾಣೀರ ಮುತ್ತಪ್ಪ, ಚೊಟ್ಟೆಯಂಡಮಾಡ ಗಣಪತಿ, ತೀತಿರ ಡಿಕ್ಕಿ, ಚೊಟ್ಟೆಯಂಡಮಾಡ ವಿನೋದ್, ಉಳುವಂಗಡ ಗಣಪತಿ, ಚೊಟ್ಟೆಯಂಡಮಾಡ ಧನಂಜಯ, ಚೆಟ್ಟಂಗಡ ಬೋಪಣ್ಣ, ಚಿಮ್ಮುಣೀರ ಅರ್ಜುನ್, ಚೊಟ್ಟೆಯಂಡಮಾಡ ಉತ್ತಯ್ಯ, ಚೊಟ್ಟೆಯಂಡಮಾಡ ರಮೇಶ್, ಅಣ್ಣಳಮಾಡ ನರೇಂದ್ರ, ಚಟ್ಟಂಗಡ ರಂಜಿ, ಕಳಕಂಡ ವಿಠಲ್, ಕೊಟ್ರಮಾಡ ತಿಮ್ಮಯ್ಯ, ಕೊಟ್ರಮಾಡ ವಿಜು ಸೋಮಯ್ಯ, ಕಟ್ಟೇರ ಹರೀಶ್, ಕೊಟ್ರಮಾಡ ಮಾದಪ್ಪ ಪಾಲ್ಗೊಂಡಿದ್ದರು. ಮುAದಿನ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮವು ಮಾದಾಪುರದಲ್ಲಿ ಆ.10 ರಂದು ಮತ್ತು ಆ.18 ರಂದು ಸುಂಟಿಕೊಪ್ಪದಲ್ಲಿ ನಡೆಯಲಿದೆ ಎಂದು ನಾಚಪ್ಪ ಇದೇ ಸಂದರ್ಭ ತಿಳಿಸಿದರು.