ಮಡಿಕೇರಿ ಜು.29 NEWS DESK : ಮೇಯಲು ಬಿಟ್ಟಿದ್ದ 6 ಹಸುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕೃಷಿಕ ಬೊಜ್ಜಂಗಡ ನಟರಾಜ್(ನಂದ) ಎಂಬುವವರಿಗೆ ಹಸುಗಳು ಸಾವನ್ನಪ್ಪಿದ್ದು, ಹೈನುಗಾರಿಕೆಯೊಂದಿಗೆ ಬದುಕು ಕಟ್ಟಿಕೊಂಡಿದ್ದ ಕುಟುಂಬ ಇದೀಗ ಕಂಗಾಲಾಗಿದೆ. ತೆರಾಲು ಗ್ರಾಮದಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದ್ದು, 11 ಕೆ.ವಿ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ಹಸುಗಳು ಬರುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.