ಮಡಿಕೇರಿ NEWS DESK ಜು.30 : ಕೊಡಗು ಜಿಲ್ಲೆಯಾದ್ಯಂತ ಮತ್ತೆ ವರುಣಾರ್ಭಟ ಆರಂಭಗೊAಡಿದೆ. ಸೋಮವಾರ ರಾತ್ರಿಯಿಂದ ಹಲವೆಡೆ ನಿರಂತರವಾಗಿ ಗಾಳಿ ಸಹಿತ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಏರ್ಪಟ್ಟಿದ್ದು, ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ನೀರು ಆವರಿಸಿದೆ. ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ದಾಖಲೆಯ 11 ಇಂಚಿಗೂ ಅಧಿಕ ಮಳೆಯಾಗಿದೆ. ಮಡಿಕೇರಿ ಮತ್ತು ನಾಪೋಕ್ಲು ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಮಳೆ ಮತ್ತಷ್ಟು ಬಿರುಸುಗೊಳ್ಳುವ ಲಕ್ಷಣಗಳು ಗೋಚರಿಸಿದ್ದು, ನದಿ ಹಾಗೂ ಬೆಟ್ಟಗುಡ್ಡ ಪ್ರದೇಶದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.