ನಾಪೋಕ್ಲು ಜು.30 NEWS DESK : ನಾಪೋಕ್ಲು ಸ್ಥಳೀಯ ಲಯನ್ಸ್ ಕ್ಲಬ್ ಮತ್ತು ಗ್ರಾಮ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನಜಾಗೃತಿ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಪಟ್ಟಣದ ಮುಖ್ಯ ಬೀದಿಗಳಲ್ಲಿ ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು, ಗ್ರಾ.ಪಂ ಚುನಾಯಿತ ಪ್ರತಿನಿಧಿಗಳು ಹಾಗೂ ಲಿಯೋ ಕ್ಲಬ್ ನ ಪದಾಧಿಕಾರಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಬಿತ್ತಿ ಪತ್ರ ಹಂಚಿ ಮಾಹಿತಿ ನೀಡುವುದರ ಮೂಲಕ ಜಾಗೃತಿ ಮೂಡಿಸಿದರು. ಇದಕ್ಕೂ ಮೊದಲು ಗ್ರಾ.ಪಂ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಠಾಣಾಧಿಕಾರಿ ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಡೆಂಗ್ಯೂ ತಡೆಗಟ್ಟುವ ಹಾಗೂ ಸೈಬರ್ ಕ್ರೈಂ ಅಪರಾಧದ ಬಗ್ಗೆ ಮುನ್ನೆಚ್ಚರಿಕೆ ಮಾಹಿತಿ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಿದ್ದಾಟ೦ಡ ಮೇರಿ ಚಿಟ್ಟಿಯಪ್ಪ ಮಾತನಾಡಿ, ಮಳೆಗಾಲದಲ್ಲಿ ಡೆಂಗ್ಯೂ ರೋಗ ಉಲ್ಪಣಿಸುತ್ತಿದೆ. ಜನರು ಜಾಗೃತರಾಗಿರಬೇಕು. ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಂಡು ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಗಟ್ಟವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಡೆಂಗ್ಯೂ ಜ್ವರ ಬಾರದಂತೆ ನಿಯಂತ್ರಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಕುಲ್ಲೇಟಿರ ಹೇಮಾ ಅರುಣ್, ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಕೋಶಾಧಿಕಾರಿ ಕಾಂಡಂಡ ರೇಖಾ ಪೊನ್ನಣ್ಣ, ಸದಸ್ಯರಾದ ಮುಕ್ಕಾಟಿರ ವಿನಯ್, ಕುಂಡ್ಯೋಳಂಡ ಗಣೇಶ ಮುತ್ತಪ್ಪ, ಕೇಟೋಳಿರ ರತ್ನ, ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಅಪ್ಪಾರಂಡ ಶಮ್ಮಿ ಅಪ್ಪಣ್ಣ, ಅಪ್ಪುಮಣಿಯಂಡ ಬನ್ಸಿ ಭೀಮಯ್ಯ, ಬೊಪ್ಪೆರ ಜಯ, ಕುಂಚೆಟ್ಟಿರ ಸುದಿ ಉತ್ತಪ್ಪ ಸೇರಿದಂತೆ ಲೈನ್ಸ್ ಲಿಯೋ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು, ಗ್ರಾ.ಪಂ ಪ್ರತಿನಿಧಿಗಳು, ಸಿಬ್ಬಂದಿಗಳು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.