ಮಡಿಕೇರಿ ಜು.30 NEWS DESK : ಮಿಷನ್ ಮೋದಿ ಡೆಮಾಕ್ರಸಿ ಡೆವೆಲಪ್ ಮೆಂಟ್ ಟ್ರಸ್ಟ್ ಸಂಘಟನೆಯ ವಿಶೇಷ ಕಾರ್ಯಕಾರಣಿ ಸಭೆಯು ಹುಬ್ಬಳ್ಳಿಯಲ್ಲಿ ನಡೆಯಿತು.
ಟ್ರಸ್ಟ್ ನ ರಾಷ್ಟ್ರೀಯ ಅಧ್ಯಕ್ಷ ರಾಮ್ ಗೋಪಾಲ್ ಕಾಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನೆಯ ಧ್ಯೆಯವಾಕ್ಯ “ಹರ್ ಹರ್ ಮೋದಿ, ಘರ್ ಘರ್ ಮೋದಿ” ಎಂಬಂತೆ ಸಮಾಜದಲ್ಲಿ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಕರ ತಂಡಗಳು ದೇಶದ 200ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೂ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಗೋವಿಂದ ಕುಲಕರ್ಣಿ, ಮೈಸೂರು ಜಿಲ್ಲಾಧ್ಯಕ್ಷ ಲೋಕೇಶ್ ನಾಗಪ್ಪ, ಉಪಾಧ್ಯಕ್ಷ ಸುರೇಶ್ ಬಾಬು, ಸಂಘಟನಾ ಕಾರ್ಯದರ್ಶಿಗಳಾದ ರವಿಶಂಕರ್, ವಿಷ್ಣು ನಾಚಪ್ಪ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಪದಾಧಿಕಾರಿಗಳು ಹಾಜರಿದ್ದರು.