ಮಡಿಕೇರಿ ಜು.30 NEWS DESK : ಆಟಿ ಪ್ರಯುಕ್ತ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಸಹಯೋಗದಲ್ಲಿ ಆ.4 ರಂದು ಎರಡನೇ ವರ್ಷದ ಆಟಿಡೊಂಜಿ ದಿನ ಬಂಟೆರೆನ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಅಸೋಸಿಯೇಷನ್ನ ಜಿಲ್ಲಾಧ್ಯಕ್ಷ ಸದಾನಂದ ರೈ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಐತ್ತಪ್ಪ ರೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಸದಾಶಿವ ರೈ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಮಡಿಕೇರಿ ನಿವೃತ್ತ ಪಿಎಸ್ಐ ಬಾಲಕೃಷ್ಣ ರೈ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಹಾಗೂ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಸಂಜೆ 4.30 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಐತ್ತಪ್ಪ ರೈ, ಉಪಾಧ್ಯಕ್ಷ ಬಿ.ಕೆ.ರವೀಂದ್ರ ರೈ, ಉದ್ಯಮಿಗಳಾದ ಜಯಪ್ರಕಾಶ್ ರೈ, ಅಶ್ವಿನಿ ಪರುಷೋತ್ತಮ್ ರೈ, ನಿತಿನ್ ಶೆಟ್ಟಿ, ಕೆ.ಡಿ.ಸತೀಶ್ ರೈ, ಡಾ.ಜಂಯತಿ ಆರ್.ಶೆಟ್ಟಿ ಸೇರಿದಂತೆ ಬಂಟರ ಸಂಘಟದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಯುವ ಬಂಟ್ಸ್ ಅಸೋಸಿಯೇಷನ್ ನಿರ್ದೇಶಕ ರವಿ ಕಿರಣ್ ಮಾತನಾಡಿ, ಆಟಿ ಪ್ರಯುಕ್ತ ವಿವಿಧ ಪಂದ್ಯಾವಳಿ, ಸಾಧಕರಿಗೆ ಸನ್ಮಾನ ಮತ್ತು ನಗರ ಬಂಟರ ಮಹಿಳಾ ಘಟಕದ ವತಿಯಿಂದ ಆಟಿ ವಿಶೇಷ ಖಾದ್ಯಗಳ ಪ್ರದರ್ಶನ ನಡೆಯಲಿದೆ ಎಂದರು.
ಪುರುಷರಿಗೆ ಫುಟ್ಬಾಲ್, ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದೆ. ಮಹಿಳೆಯರಿಗೆ ಹಗ್ಗಜಗ್ಗಾಟ, ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ. ಅಲ್ಲದೇ ಸಂಜೆ 5 ಗಂಟೆಗೆ ಗೀತ-ಸಾಹಿತ್ಯ ಸಂಭ್ರಮ ನಡೆಯಲಿದ್ದು, ಕಲ್ಲಡ್ಕದ ವಿಠಲ ನಾಯಕ್ ಮತ್ತು ಬಳಗದಿಂದ ವಿನೂತನ ಶೈಲಿಯ ಸಂದೇಶ ಸಂತೋಷ ಕಾರ್ಯಕ್ರಮ ನೆರವೇರಲಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ನ ಪ್ರಧಾನ ಕಾರ್ಯದರ್ಶಿ ನಿತಿನ್ ರೈ, ಮಾಜಿ ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಖಜಾಂಚಿ ಹೊರಮಲೆ ಶಿವಪ್ರಸಾದ್, ನಿರ್ದೇಶಕ ಸುನೀಲ್ ಶೆಟ್ಟಿ ಉಪಸ್ಥಿತರಿದ್ದರು.
Breaking News
- *ಕೊಡಗಿನ ಬಸವೇಶ್ವರ, ಪೇಟೆ ರಾಮ ಮಂದಿರ, ವಿಜಯ ವಿನಾಯಕ ದೇವಾಲಯಗಳಲ್ಲಿ ಕಳ್ಳತನ : ಅಂತರ್ ಜಿಲ್ಲಾ ಆರೋಪಿಯ ಬಂಧನ*
- *ಕನಕದಾಸರು ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು : ಶಾಸಕ ಡಾ.ಮಂತರ್ ಗೌಡ*
- *ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ನಾಯಕ್ ಕೂಕಂಡ ಎನ್.ಪೊನ್ನಪ್ಪ ನಾಮಕರಣ : ಎಲ್ಲೆಡೆ ವೀರಯೋಧರಿಗೆ ಗೌರವಸಲ್ಲಿಸುವ ಕಾರ್ಯವಾಗಬೇಕು : ಕೊಟ್ಟುಕತ್ತಿರ ಸೋಮಣ್ಣ*
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿದೆ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*