ಮಡಿಕೇರಿ ಜು.31 NEWS DESK : ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಂದ ಹಾರಂಗಿ ಪ್ರವಾಸಿ ಮಂದಿರದಲ್ಲಿ ಮಾಹಿತಿ ಪಡೆದರು. ರಸ್ತೆ, ಸೇತುವೆ, ವಿದ್ಯುತ್ ಕಂಬ ಮತ್ತು ಪರಿವರ್ತಕಗಳು, ಬೆಳೆ ಹಾಗೂ ಮನೆ ಹಾನಿ ಹೀಗೆ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಬಗ್ಗೆ ಮಾಹಿತಿ ಪಡೆದರು.