ಮಡಿಕೇರಿ ಜು.31 NEWS DESK : ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಕುಶಾಲನಗರ ತಾಲ್ಲೂಕಿನ ಅತ್ತೂರು ಗ್ರಾಮ ಹಾಗೂ ತೆಪ್ಪಗುಂಡಿ ಗ್ರಾಮಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಂಟಿಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತ ಕುಟುಂಬಗಳನ್ನು ಭೇಟಿ ಅವರಿಗೆ ಧೈರ್ಯ ಹೇಳಿದರು. ವಾಲ್ನೂರು ತ್ಯಾಗತ್ತೂರು ಕಾಳಜಿ ಕೇಂದ್ರಕ್ಕೆ ಸಚಿವದ್ವಯರು ಹಾಗೂ ಶಾಸಕರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಹಾನಿಯಾದ ಮನೆ, ಸ್ವತ್ತುಗಳಿಗೆ ಅಗತ್ಯ ವಸ್ತುಗಳನ್ನು ನೀಡುವಂತೆ ಹಾಗೂ ಪ್ರಾಣ ಹಾನಿ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಇದೇ ಸಂದರ್ಭ ಸೂಚಿಸಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.











