
ಸಕಲೇಶಪುರ NEWS DESK ಜು.31 : ಸಕಲೇಶಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ದೊಡ್ಡತಪ್ಲು ಬಳಿ ಬೃಹತ್ ಗುಡ್ಡ ಕುಸಿದಿದ್ದು, ವಾಹನಗಳು ಮಣ್ಣಿನಡಿ ಸಿಲುಕಿವೆ. ಗುಡ್ಡ ಕುಸಿದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದೆ. ಹೆದ್ದಾರಿ ಬಂದ್ ಆಗಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಗುಡ್ಡ ಕುಸಿದು ಕಾರು, ಟಿಪ್ಪರ್ ಗಳು ಕೆಸರಿನಲ್ಲಿ ಸಿಲುಕಿಕೊಂಡಿದ್ದವು. ಇದೀಗ ಮತ್ತೆ ಇದೇ ರೀತಿಯ ಘಟನೆ ನಡೆದಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.











