ಅದೇ ರೀತಿ ಪರಿಶಿಷ್ಟ ಪಂಗಡದ ಜನರಿಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆದ್ದರಿಂದ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಪರಿಶಿಷ್ಟ ಪಂಗಡದ ಜನಾಂಗದವರು ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಬಹುದಾಗಿದ್ದು, ಆಸಕ್ತರು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.