ಕಾರ್ಯಕ್ರಮದಲ್ಲಿ ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ 15 ಮಂದಿಗೆ ‘ಕಾವೇರಿ ರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರ0ಜನ್ ಮಾತನಾಡಿ, ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾ ರಂಗವು ಇಂದು ಕ್ರಿಯಾಶೀಲವಾಗಿ ಹಾಗೂ ಪ್ರಭಾವಿ ಮಾಧ್ಯಮವಾಗಿ ಬೆಳೆದಿದ್ದು, ರಾಜಕಾರಣಿಗಳು ಮತ್ತು ಅಧಿಕಾರಿ ವರ್ಗ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ತಪ್ಪುಗಳಿದ್ದಲ್ಲಿ ಅದನ್ನು ತಿದ್ದುವ ಮೂಲಕ ಸಕಾರಾತ್ಮಕ ವಿಮರ್ಶೆಗಳನ್ನು ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಸಮಾಜದಲ್ಲಿ ಉತ್ತಮ ಸೇವಾ ಕಾರ್ಯ ಮಾಡಿದವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅವರ ಸೇವೆಗೆ ಮತ್ತಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ರಂಜನ್ ಹೇಳಿದರು.
ಮುಖ್ಯ ಭಾಷಣ ಮಾಡಿದ ನಿವೃತ್ತ ಚಿತ್ರಕಲಾ ಶಿಕ್ಷಕ ಹಾಗೂ ಚಿಂತಕ ಉ.ರಾ.ನಾಗೇಶ್, ಪತ್ರಿಕಾ ರಂಗವು ಇಂದು ಸಂವಿಧಾನದ ನಾಲ್ಕನೇ ಅಂಗವಾಗಿ ಬೃಹತ್ತಾಗಿ ಬೆಳೆದಿದ್ದು, ಇದು ಸಮಾಜದ ಸ್ವಾಸ್ಥ್ಯದ ಬೆಳವಣಿಗೆಗೆ ಶ್ರಮಿಸುತ್ತಿವೆ ಎಂದರು. ರಾಜ್ಯದಲ್ಲಿ ಮೊದಲ ಬಾರಿಗೆ ಮಂಗಳೂರಿನಿ0ದ ಹೊರ ಬಂದ ಮಂಗಳೂರು ಸಮಾಚಾರ ಕನ್ನಡ ಪತ್ರಿಕೆಯು ಬರವಣಿಗೆಯ ಮೂಲಕ ಬಂದ ಕುರಿತು ಅವರು ತಿಳಿಸಿದರು.
ವಕೀಲ ಆರ್.ಕೆ.ನಾಗೇಂದ್ರಬಾಬು ಮಾತನಾಡಿ, ಇಂದಿನ ಯುವ ಸಮಾಜವನ್ನು ಯಾವುದೇ ಮಾಧ್ಯಮಗಳಾಗಲೀ, ದೃಶ್ಯ ಮಾಧ್ಯಗಳಾಗಲೀ ಯಾವುದೇ ರೀತಿಯಲ್ಲಿ ಕ್ರೌರ್ಯದ ಕಡೆಗೆ ಕೊಂಡೊಯ್ಯದೇ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಿದೆ ಎಂದರು.
ಸಿಪಿಐ ರಾಜೇಶ್ ಕೋಟ್ಯಾನ್ ಮಾತನಾಡಿ, ಪ್ರತಿಯೊಬ್ಬರೂ ದಿನನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ದಿನನಿತ್ಯದ ವಿದ್ಯಮಾನಗಳನ್ನು ತಿಳಿದುಕೊಳ್ಳಬೇಕು ಎಂದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ಅವರ ಸೇವೆಗೆ ಮತ್ತಷ್ಟು ಬೆಂಬಲ ನೀಡಿದಂತಾಗುತ್ತದೆ ಎಂದರು.
ಮು0ಬೈನ ಉದ್ಯಮಿ ಬಿ.ಎಸ್.ಸದಾಶಿವಶೆಟ್ಟಿ ಮಾತನಾಡಿ, ಎಲ್ಲರೂ ಕನ್ನಡ ಪತ್ರಿಕೆಗಳನ್ನು ಓದುವ. ಮೂಲಕ ನಮ್ಮ ನಾಡಿನ ಕಲೆ, ಸಂಸ್ಕೃತಿಯನ್ನು ಬೆಳೆಸಬೇಕು. ನಾಡಿನ ಕನ್ನಡ ಶಾಲೆಗಳ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ಸಂಗಮ ಟಿ.ವಿ.ಸುದ್ದಿವಾಹಿನಿಯ ಸಂಪಾದಕ ಎಚ್.ಎಂ.ರಘು, ನಾವು ಸಮಾಜದಲ್ಲಿ ವಿವಿಧ ಸಾಮಾಜಿಕ ಕಾರ್ಯದಲ್ಲಿ ತೊಡಗಿ ಉತ್ತಮ ಸಾಧನೆ ಮಾಡಿದವರನ್ನು ಗುರುತಿಸಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಇಂತಹ ಕಾರ್ಯಕ್ರಮಗಳಿಗೆ ಎಲ್ಲರೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿದರು. ಕರವೇ ರಾಜ್ಯ ಸಂಚಾಲಕಿ ದೀಪಾ ಪೂಜಾರಿ, ದಸಂಸಯ ಪ್ರಮುಖರಾದ ಕೆ.ಬಿ.ರಾಜು, ಎಚ್.ಜೆ.ದಾಮೋದರ ಇತರರು ಇದ್ದರು. ಸೋಮವಾರಪೇಟೆ ಸಂತ ಜೋಸೆಫರ ಕಾಲೇಜಿನ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು.
ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ : ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ರಂಗಭೂಮಿ ಕಲಾವಿದ ಕೂಡ್ಲೂರಿನ ಭರಮಣ್ಣ ಟಿ.ಬೆಟಗೇರಿ, ಕುಶಾಲನಗರ ಮೂಕಾಂಬಿಕಾ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್, ಕರಾವೇ ಉಪಾಧ್ಯಕ್ಷ ಬಿ.ಎ.ದಿನೇಶ್, ಸಿಪಿಐ ರಾಜೇಶ್ ಕೋಟ್ಯಾನ್, ಮುಂಬೈ ಉದ್ಯಮಿ ಬಿ.ಎಸ್.ಸದಾಶಿವ ಶೆಟ್ಟಿ, ಪತ್ರಕರ್ತ ಅಂಚೆಮನೆ ಸುಧಿಕುಮಾರ್, ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಜೆ.ರಜನೀಕಾ0ತ್, ಅಂತರಾಷ್ಟ್ರೀಯ ಟೇಕ್ವಾಂಡೋ ಆಟಗಾರ ಎ.ಪಿ.ರಿಮೋನ್ ಪೊನ್ನಣ್ಣ, ಕುಶಾಲನಗರ ಫಾತಿಮ ಕಾನ್ವೆಂಟ್ ನ ದೈಹಿಕ ಶಿಕ್ಷಣ ಶಿಕ್ಷಕ ಎಂ.ಸAತೋಷ್ ಕುಮಾರ್, ಸ್ಥಳೀಯ ಸುಗಮ ಸಂಗೀತ ಕಲಾವಿದ ರವಿ ಆರ್.ಶಾಸ್ತ್ರಿ, ಜಿಲ್ಲಾ ಹೋಟೆಲ್ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಆರ್.ನಾಗೇಂದ್ರ, ಕುಂದಚೇರಿಯ ಆಶಾ ಕಾರ್ಯಕರ್ತೆ ಎಚ್.ಎಸ್.ರೀನಾ, ನೆಲ್ಯಹುದಿಕೇರಿಯ ಆಟೋರಿಕ್ಷಾ ಚಾಲಕಿ ಎಸ್.ಸುಜಾತ, ಗಜೇಂದ್ರಗಢದ ಸಾಹಿತಿ ಹನುಮಂತ ಲೀ ಸೋಮನಕಟ್ಟಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ “ಕಾವೇರಿ ರತ್ನ ಪ್ರಶಸ್ತಿ” ನೀಡಿ ಗೌರವಿಸಿ ಸನ್ಮಾನಿಸಲಾಯಿತು.