Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ವಿಶ್ವ ಸ್ತನ್ಯಪಾನ ಸಪ್ತಾಹ : ಮಕ್ಕಳ ಬೆಳವಣಿಗೆಗೆ ಸ್ತನ್ಯಪಾನ ಅಗತ್ಯ : ಡಾ.ಮಧುಸೂಧನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ವಿಶ್ವ ಸ್ತನ್ಯಪಾನ ಸಪ್ತಾಹ : ಮಕ್ಕಳ ಬೆಳವಣಿಗೆಗೆ ಸ್ತನ್ಯಪಾನ ಅಗತ್ಯ : ಡಾ.ಮಧುಸೂಧನ್*

ಆಗಷ್ಟ್ 1, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.1 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ನಡೆಯಿತು. ಆ.7 ರವರೆಗೆ ನಡೆಯುವ ‘ವಿಶ್ವ ಸ್ತನ್ಯಪಾನ ಸಪ್ತಾಹ’ ಕಾರ್ಯಕ್ರಮವನ್ನು “ಕೊರತೆಗಳನ್ನು ಕೊನೆಗೊಳಿಸಿ: ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ” ಎಂಬ ಘೋಷವಾಕ್ಯದೊಂದಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಚಾಲನೆ ನೀಡಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂಧನ್ ಎ.ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತೀ ವರ್ಷದಂತೆ ಈ ವರ್ಷವೂ ಆಗಸ್ಟ್ 1 ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಸ್ತನ್ಯಪಾನದ ಪ್ರಯೋಜನಗಳನ್ನು ಉತ್ತೇಜಿಸಲು ಮತ್ತು ಮಕ್ಕಳ ಬೆಳವಣಿಗೆಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಜಿಲ್ಲಾ ಆಸ್ಪತ್ರೆ/ ತಾಲ್ಲೂಕು ಆಸ್ಪತ್ರೆ, ಸ.ಆ.ಕೇಂದ್ರ, ಪ್ರಾ.ಆ.ಕೇಂದ್ರಗಳಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಂಜುAಡಯ್ಯ ಅವರು ಮಾತನಾಡಿ ಸ್ತನ್ಯಪಾನವು ಅಭಿವೃದ್ಧಿಶೀಲ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟçಗಳಲ್ಲಿ ಉಸಿರಾಟದ ತೊಂದರೆಯನ್ನು ಕಡಿಮೆ ಮಾಡುತ್ತದೆ. ಅಸ್ತಮಾ, ಆಹಾರ ಅಲರ್ಜಿ, ಮಧುಮೇಹ ಮತ್ತು ಅನೀಮಿಯಾ ಆಗುವ ಅಪಾಯಗಳು ಕಡಿಮೆ ಎಂದು ಹೇಳಿದರು.
ಪ್ರಸವದ ನಂತರ ಬರಬಹುದಾದ ಖಿನ್ನತೆ ಕಡಿಮೆಯಾಗುತ್ತದೆ. ಬಾಣಂತಿಯರು ಎದೆಹಾಲಿನ ಮಹತ್ವದ ಬಗ್ಗೆ ಅರಿತು ಮಗು ಜನಿಸಿದ ಒಂದು ಗಂಟೆಯೊಳಗೆ ಹಾಲುಣಿಸುವುದರಿಂದ ಮಗುವಿನ ಬೆಳವಣಿಗೆ ಮತ್ತು ಮೆದುಳಿನ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಡಾ.ಪುರುಷೋತ್ತಮ್ ಅವರು ಮಾತನಾಡಿ ದೇಶದಲ್ಲಿ ಎನ್.ಎಫ್.ಹೆಚ್.ಎಸ್ 4ರ ಪ್ರಕಾರ ಮಗು ಜನಿಸಿದ ಒಂದು ಗಂಟೆಯೊಳಗೆ ಎದೆಹಾಲು ಉಣಿಸುತ್ತಿರುವವರ ಸಂಖ್ಯೆ ಕೇವಲ ಶೇ.48 ಇದ್ದು, ಶೇ.52 ರಷ್ಟು ಮಕ್ಕಳು ಒಂದು ಗಂಟೆಯ ಒಳಗಿನ ಎದೆಹಾಲು ಸೇವನೆಯಿಂದ ವಂಚಿತರಾಗುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಎದೆಹಾಲು ಬಿಟ್ಟು ಇತರೆ ಬಾಟಲ್ ಹಾಲು ನೀಡುತ್ತಿರುವುದರಿಂದ ಮಕ್ಕಳಿಗೆ ಅಪೌಷ್ಠಿಕತೆ, ಸೋಂಕು ತಗಲುವ ಸಂಭವ ಹೆಚ್ಚು. ಎದೆಹಾಲನ್ನು ಮಗು ಜನಿಸಿದ ಒಂದು ಗಂಟೆಯೊಳಗೆ ಪ್ರಾರಂಭಿಸಿ ಕನಿಷ್ಠ 6 ತಿಂಗಳವರೆಗೆ ನೀಡಬೇಕು ಹಾಗೂ ಗರಿಷ್ಟ 2 ರಿಂದ 3 ವರ್ಷಗಳವರೆಗೂ ನೀಡುವುದು ಉತ್ತಮ ಎಂದು ತಿಳಿಸಿದರು. ಅಲ್ಲದೇ ಮೂಡನಂಬಿಕೆಗಳಿAದ ಜೇನುತುಪ್ಪ, ಸಿಹಿನೀರು, ಇತರೆ ಆಹಾರವನ್ನು ಮಗುವಿಗೆ ನೀಡುವುದರಿಂದ ಶಿಶುಗಳಿಗೆ ಸೋಂಕು ತಗಲುವ ಸಂಭವ ಹೆಚ್ಚು. ಅಲ್ಲದೇ ಎದೆನಾಗರ, ಇತರೆ ಕಾಯಿಲೆಗಳಿಗೆ ತಪ್ಪು ನಂಬಿಕೆಯಿAದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ತಿಳಿಸಿದರು. ಅಲ್ಲದೇ ಎದೆಹಾಲಿನ ಮಹತ್ವದ ಬಗ್ಗೆ ಸವಿವರವಾಗಿ ತಿಳಿದುಕೊಳ್ಳಲು ನಂತರ ಆರೋಗ್ಯವಂತ ಶಿಶು ಪ್ರದರ್ಶನವನ್ನು ಇಲಾಖೆ ವತಿಯಿಂದ ನಡೆಸಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಲು ತಿಳಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಹಿರಿಯ ವೈದ್ಯಕೀಯ ತಜ್ಞರಾದ ಡಾ.ರವಿಚಂದ್ರ ಅವರು ಮಾತನಾಡಿ ಪ್ರತೀ ಪ್ರಾಣಿಗಳು ತಮ್ಮ ಮಕ್ಕಳಿಗೆ ಹುಟ್ಟಿದ ಕೂಡಲೇ ಎದೆಹಾಲನ್ನು ನೀಡುತ್ತವೆ. ಈಗಿನ ತಾಯಂದಿರು ಮಗು ಜನಿಸಿದ ತಕ್ಷಣ ಎದೆಹಾಲು ನೀಡುವುದು ಕಡಿಮೆ. ತಾಯಿಯ ಎದೆಹಾಲು ಅಮೃತ. ಇದರಲ್ಲಿ ಮಗುವಿಗೆ ಅವಶ್ಯಕವಾದ ಪೋಷಕಾಂಶಗಳು, ರೋಗ ನಿರೋಧಕ ಶಕ್ತಿ ಇದ್ದು, ಮಗುವಿನ ಮೆದುಳಿನ ಬೆಳವಣಿಗೆಗೆ ಅತ್ಯಾವಶ್ಯಕ ಎಂದು ತಿಳಿಸಿದರು. ಮಕ್ಕಳ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ದಿವ್ಯಾರಾಣಿ ಅವರು ಪಿಪಿಟಿ ಮುಖಾಂತರ ವಿವರಿಸುತ್ತಾ, ಮಗುವಿಗೆ ಜನ್ಮ ನೀಡುವುದು ಒಂದು ಸಂಕೀರ್ಣ ಕ್ರಿಯೆ. ತಾಯಿಯ ಎದೆಹಾಲು ವಿಶ್ವದ ಶ್ರೇಷ್ಠ ಆಹಾರ. ಇದು ಅಮೃತಕ್ಕೆ ಸಮಾನ. ಸಂಪೂರ್ಣ ಪೌಷ್ಠಿಕ ಸಮತೋಲನ ಆಹಾರ. ಭಾವನಾತ್ಮಕ ಸಂಬAಧದ ಬೆಸುಗೆ, ಸುಲಭವಾಗಿ ಜೀರ್ಣವಾಗುವ, ಸಂರಕ್ಷಿಸಿ ಇಡುವ ಅಗತ್ಯವಿಲ್ಲದ, ಖರ್ಚಿಲ್ಲದ, ಮಗುವಿಗೆ ರುಚಿಯಾದ ಸಿದ್ಧ ಆಹಾರ., ಅಮೃತ ಸಂಜೀವಿನಿ ಎಂದು ತಿಳಿಸಿದರು.
ಅಲ್ಲದೇ ಎದೆಹಾಲಿನ ಮಹತ್ವ, ಎದೆಹಾಲು ಉಣಿಸುವ ಭಂಗಿಗಳು, ಹಾಲುಣಿಸುವಿಕೆಯ ಅಂತರ, ಸ್ತನಗಳ ಆರೈಕೆ, ಹಾಲುಕೊಡುವ ಅವಧಿ, ತಾಯಿಗೆ ಎದೆಹಾಲು ಉಣಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಸವಿವರವಾಗಿ ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ ಅವರು ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದ ಉದ್ದೇಶಗಳು, ಆಚರಣೆ, ಸೆಮಿನಾರ್ ಆಯೋಜಿಸಿ ಸಾಮಾನ್ಯ ಮಹಿಳೆಯರಿಗೆ ಸ್ತನ್ಯಪಾನದ ಉಪಯುಕ್ತತೆ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಪ್ರಸ್ತುತಪಡಿಸಲು ಸ್ತ್ರೀರೋಗ ತಜ್ಞರಿಂದ ಉಪನ್ಯಾಸ ಮಾಡಿಸುವುದು. ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಸ್ತನ್ಯಪಾನವನ್ನು ಬೆಂಬಲಿಸುವ ಪ್ರತಿಜ್ಞೆಯನ್ನು ಟಿ.ಎನ್ ಪಾಲಾಕ್ಷ ಸಭೆಯಲ್ಲಿ ಬೋಧಿಸಿದರು. ವೈದ್ಯಕೀಯ ಅಧೀಕ್ಷಕರಾದ ಡಾ.ಸೋಮಶೇಖರ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೇಲ್ವಿಚಾರಕರು, ಸಿಬ್ಬಂಧಿಗಳು, ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂಧಿಗಳು, ಗರ್ಭಿಣಿಯರು, ಬಾಣಂತಿಯರು, ಸಾರ್ವಜನಿಕರು ಭಾಗವಹಿಸಿದ್ದರು. ಅಶ್ವಿನಿ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.29 : ಕೂಡಿಗೆಯ ಸೈನಿಕ ಶಾಲೆ ಕೊಡಗು ತನ್ನ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ 2025–26ನೇ ಶೈಕ್ಷಣಿಕ…

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.