ಜಿಲ್ಲೆಯ ಗಡಿ ಆನೆಚೌಕೂರು ನಲ್ಲಿ ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್ ಪೊನ್ನಣ್ಣ , ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಮುಖಂಡ ಟಿ.ಪಿ.ರಾಮೇಶ್ ಹಾಜರಿದ್ದರು.