ಮಡಿಕೇರಿ ಆ.2 NEWS DESK : ಕೆದಮುಳ್ಳೂರು ಗ್ರಾಮದ ಮಳೆಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.