ಸಾಗರ್ NEWS DESK ಆ.4 : ದೇವಾಲಯವೊಂದರ ಗೋಡೆ ಕುಸಿದು ಬಿದ್ದು 10ರಿಂದ 15 ವರ್ಷದ 9 ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ನಡೆದಿದೆ. ಶಹಪುರ್ ಗ್ರಾಮದ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ ಪಾಳು ಬಿದ್ದಿದ್ದ ಗೋಡೆ ಕುಸಿದು ಬಿದ್ದು ಈ ಘಟನೆ ಸಂಭವಿಸಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ತಲಾ 4ಲಕ್ಷ ರೂ. ಪರಿಹಾರ ಘೋಷಿಸಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ.