ಮಡಿಕೇರಿ NEWS DESK ಆ.5 : ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ನಡೆದಿದೆ. ಮೈಸೂರು ಮೂಲದ ಪವನ್ ಹಾಗೂ ಮನೋಜ್ ಮೃತ ಯುವಕರು ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಇಬ್ಬರು ಯುವಕರು ಮೈಸೂರಿನಿಂದ ಧರ್ಮಸ್ಥಳದ ಕಡೆಗೆ ಪ್ರಯಾಣ ಬೆಳೆಸಿದ್ದರು ಎಂದು ಹೇಳಲಾಗಿದೆ. ಬೈಕ್ ಅಪಘಾತದ ಸಂದರ್ಭ ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ರಾತ್ರಿ ನಡೆದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ಕುರಿತು ತನಿಖೆ ಕೈಗೊಂಡಿದ್ದಾರೆ.