ಮಡಿಕೇರಿ ಆ.5 NEWS DESK : ಆಟಿ ಪ್ರಯುಕ್ತ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಸಹಯೋಗದಲ್ಲಿ 2ನೇ ವರ್ಷದ ಆಟಿಡೊಂಜಿ ದಿನ ಬಂಟೆರೆನ ಸಮ್ಮಿಲನ ಕಾರ್ಯಕ್ರಮ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಐತ್ತಪ್ಪ ರೈ ಉದ್ಘಾಟಿಸಿ, ಶುಭಕೋರಿದರು. ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಸದಾಶಿವ ರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ, ಜಿಲ್ಲಾ ಬಂಟರ ಸಂಘದ ಕಾರ್ಯದರ್ಶಿ ಬಿ.ಸಿ.ಹರೀಶ್ ರೈ, ಬಂಟರ ಮಹಿಳಾ ಘಟಕದ ಉಪಾಧ್ಯಕ್ಷೆ ಬೇಬಿ ಜಯ ರಾಮ್ ರೈ, ಪ್ರಧಾನ ಕಾರ್ಯದರ್ಶಿ ಸುಜಾತ ಗಣೇಶ್ ರೈ, ಯುವ ಬಂಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಸುಜಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತಿನ್ ರೈ, ಖಜಾಂಚಿ ಶಿವಪ್ರಸಾದ್ ರೈ, ನಿವೃತ್ತ ಪಿಎಸ್‍ಐ ಬಾಲಕೃಷ್ಣ ರೈ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.ಅಕ್ಷತಾ ಶರತ್ ರೈ ನಿರೂಪಿಸಿದರು. ಚಂದ್ರಶೇರ್ ರೈ ಸ್ವಾಗತಿಸಿದರು. ವೀಣಾ ರೈ ವಂದಿಸಿದರು. ಬಳಿಕ ಫುಟ್ಬಾಲ್, ವಾಲಿಬಾಲ್, ಹಗ್ಗಜಗ್ಗಾಟ, ಥ್ರೋಬಾಲ್ ಮತ್ತಿತರ ಕ್ರೀಡಾ ಸ್ಪರ್ಧೆಗಳು ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರವದಲ್ಲಿ ಸಾಧಕರಿಗೆ ಸನ್ಮಾನ ಮತ್ತು ನಗರ ಬಂಟರ ಮಹಿಳಾ ಘಟಕದ ವತಿಯಿಂದ ಆಟಿ ವಿಶೇಷ ಖಾದ್ಯಗಳ ಪ್ರದರ್ಶನ ನಡೆಯಿತು. ಸಂಜೆ ಕಲ್ಲಡ್ಕದ ವಿಠಲ ನಾಯಕ್ ಮತ್ತು ಬಳಗದಿಂದ ವಿನೂತನ ಶೈಲಿಯ ಸಂದೇಶ ಸಂತೋಷ ಕಾರ್ಯಕ್ರಮ ನೆರವೇರಿತು.
Breaking News
- *ಸುಂಟಿಕೊಪ್ಪದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*