ಬೆಳಗಾವಿ NEWS DESK ಆ.5 : ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಕಟ್ಟೆಚ್ಚರ ವಹಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು. ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು. ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು. ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳ ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್ ಕಂಬ, ಟ್ರಾನ್ಸ್‌ಫಾರ್ಮರ್ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ. *ಗೃಹಲಕ್ಷ್ಮಿ* ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*