Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*
  • *ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*
  • *ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*
  • *ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*
  • *ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಗಮನ ಸೆಳೆದ ಆಟಿಡೊಂಜಿ ದಿನ ಕಾರ್ಯಕ್ರಮ : ಸಂಘದ ಲೋಗೋ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಗಮನ ಸೆಳೆದ ಆಟಿಡೊಂಜಿ ದಿನ ಕಾರ್ಯಕ್ರಮ : ಸಂಘದ ಲೋಗೋ ಬಿಡುಗಡೆ*

ಆಗಷ್ಟ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಆ.5 NEWS DESK : ಮೊಬೈಲ್, ಟಿವಿಯಂತಹ ಮಾಧ್ಯಮಗಳಿಂದ ಮಕ್ಕಳು,ಯುವ ಜನಾಂಗದವರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ವಿದ್ಯೆಯಿಂದಷ್ಟೇ ಮುಂದೆ ಬರಲು ಸಾಧ್ಯ ಎಂದು ಮಡಿಕೇರಿ ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ ಹೇಳಿದರು.

ಬಿಲ್ಲವ ಸಮಾಜದ ವತಿಯಿಂದ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಬೇಕಾದರೆ ವಿದ್ಯೆ ಮುಖ್ಯ.ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ನೀಡಬೇಕು. ಮೊಬೈಲ್ ನಿಂದ ಸಾಧ್ಯವಾದಷ್ಟು ದೂರವಿದ್ದು ಬಡ ಜನರಿಗೆ ಸಹಾಯ ಮಾಡಿ ಹೆಚ್ಚಿನ ವಿದ್ಯೆಯನ್ನುಗಳಿಸಲು ಪ್ರೋತ್ಸಾಹಿಸಬೇಕು ಎಂದರು.
ಮಡಿಕೇರಿ ಬಿಲ್ಲವ ಸಮಾಜದ ಮಾಜಿ ಅಧ್ಯಕ್ಷ ಎಲಿಯಣ್ಣ ಪೂಜಾರಿ ಮಾತನಾಡಿ, ಸಂಘಟನೆಯಿಂದ ಯಶಸ್ಸು ಸಾಧ್ಯ ಎಂದರು. ನಾಪೋಕ್ಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಅನಿಲ್ ಮಾತನಾಡಿ ಸಮಾಜದಲ್ಲಿ ವ್ಯಕ್ತಿ ಬೆಳೆಯುತ್ತಾ ಸಮಾಜ, ಸಂಸ್ಕೃತಿ, ಪದ್ಧತಿಗಳ ಬಗ್ಗೆ ಅರಿತುಕೊಳ್ಳಬೇಕು. ತಮ್ಮ
ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಂಘದ ಅವಶ್ಯಕತೆ ಇದೆ ಎಂದರು.
ಬಂಟ್ವಾಳದ ವಾಗ್ಮಿ ಶ್ರೀನಿಧಿ ಮಾತನಾಡಿ, ತುಳು ನಾಡು ಸಂಸ್ಕೃತಿಯ ನಾಡಾಗಿದ್ದು, ತುಳು ಸಂಸ್ಕೃತಿಗೆ ಅಳಿವು ಇಲ್ಲ. ತುಳು ಭಾಷಿಗರು ತಮ್ಮ ಸಂಸ್ಕೃತಿಯನ್ನು ಯುವ ಜನಾಂಗಕ್ಕೆ ಪರಿಚಯಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ಆಟಿ ತಿಂಗಳಿಗೆ ವಿಶೇಷ ಮಹತ್ವ ಇದೆ. ಮಳೆಗಾಲದ ಈ ದಿನಗಳಲ್ಲಿ ಸಸ್ಯಗಳಲ್ಲಿ ಆಯುರ್ವೇದ ಅಂಶಗಳು ಜಾಸ್ತಿ ಇರುವುದರಿಂದ ವೈವಿಧ್ಯಮಯ ತಿನಿಸುಗಳನ್ನು ಮಾಡಿ ಸೇವಿಸುವುದು ರೂಢಿಯಲ್ಲಿದೆ. ನಂತರದ ಸೋನೆ ತಿಂಗಳಿನಲ್ಲಿ ಸಮಾರಂಭಗಳಿಗೆ ಮಹತ್ವ ಇದೆ. ವರ್ಷದ ವಿವಿಧ ತಿಂಗಳುಗಳನ್ನು ವೈವಿಧ್ಯಮಯವಾಗಿ ಆಚರಿಸುವ ಬಿಲ್ಲವ ಜನಾಂಗ ತುಳುನಾಡಿನ ಸಂಸ್ಕೃತಿಯ ಸಾರವನ್ನು ಮಕ್ಕಳಿಗೆ ತಿಳಿಸುವಂತ ಕೆಲಸ ಆಗಬೇಕಿದೆ. ತುಳು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಹಿರಿಯರು ಮಾಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಅಪ್ಪು ರವೀಂದ್ರ, ನೋಟರಿ ವಕೀಲರಾದ ದಯಾ ಹೊನ್ನಪ್ಪ ಮಾತನಾಡಿದರು.
ಬಿಲ್ಲವ ಸಂಘದ ಅಧ್ಯಕ್ಷ ಬಿ.ಎಮ್. ಪ್ರತಿಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಬಿಲ್ಲವ ಜನಾಂಗವನ್ನು ಒಗ್ಗೂಡಿಸುವ ಉದ್ದೇಶದಿಂದ ಸಂಘ ಸ್ಥಾಪಿಸಲಾಗಿದೆ. ಸಂಘದಲ್ಲಿ 217 ಸದಸ್ಯರಿದ್ದಾರೆ. ರಕ್ತದಾನದ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಸಂಘ ಇತರರಿಗೆ ಮಾದರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ,ನಿವೃತ ಸೇನಾಧಿಕಾರಿ ಕ್ಯಾಪ್ಟನ್ ಪೂವಪ್ಪ, 50ಕ್ಕೂ ಅಧಿಕ ಭಾರಿ ರಕ್ತದಾನ ಮಾಡಿದ ರಾಮಪ್ಪ ಪೊಲೀಸ್, ಸಿವಿಲ್ ಕಂಟ್ರಾಕ್ಟರ್ ಗೋಪಾಲ, ನಿವೃತ್ತ ಪೊಲೀಸ್ ಅಧಿಕಾರಿ ಲಿಂಗಪ್ಪ, ಸಂಘದ ಉಪಾಧ್ಯಕ್ಷ ವಸಂತ್ ಅರುಣ, ಸಂಘಟನಾ ಕಾರ್ಯದರ್ಶಿ ನಾಗರಾಜ್ , ಖಜಾಂಚಿ ಬಿ.ಡಿ.ದೀಪಕ್, ಸಂಘದ ನಿರ್ದೇಶಕರು ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.
ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ 70ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಸಂಘದ ಲೋಗೋವನ್ನು ಬಿಡುಗಡೆ ಮಾಡಲಾಯಿತು. ಯೋಗ ಪ್ರದರ್ಶಿಸಿ ಜನ ಮೆಚ್ಚುಗೆಗೆ ಪಾತ್ರರಾದ ಪುಟಾಣಿ ಪ್ರತಿಭೆ ಸಿಂಚನಳನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪುಟಾಣಿಗಳಾದ ವಿಸ್ಮಿತ, ದೃತಿ ಮತ್ತು ಆಶಾ ಅವರಿಂದ ಸ್ವಾಗತ ನೃತ್ಯ ಮಾಡಿದರು. ಮಡಿಕೇರಿ ರಕ್ತ ನಿಧಿ ವಿಭಾಗದ ಸಿಬ್ಬಂದಿಗಳಿಗೆ ಸಂಘದ ವತಿಯಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ನಿವೇದಿತಾ ತಂಡ ಪ್ರಾರ್ಥಿಸಿದರು. ಬಿಲ್ಲವ ಸಮಾಜದ ಕಾರ್ಯದರ್ಶಿ ರೋಹಿತ್ ಸ್ವಾಗತಿಸಿದರು. ಕಿಶೋರ್ ನಿರೂಪಿಸಿದರು. ಅಧ್ಯಕ್ಷ ಬಿ.ಎಂ.ಪ್ರತೀಪ ವಂದಿಸಿದರು. ಕಾರ್ಯಕ್ರಮದಲ್ಲಿ ಆಟಿ ತಿಂಗಳ ವಿಶೇಷ ಖಾದ್ಯಗಳ ಪ್ರದರ್ಶನ ನಡೆಯಿತು

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*

ಮಾರ್ಚ್ 30, 2026

*ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 30, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*

ಮಾರ್ಚ್ 30, 2026

*ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.30 NEWS DESK : ಮಾಯಮುಡಿಯಲ್ಲಿ ಆಯೋಜನೆಗೊಂಡ ಎಂಪಿಎಲ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು…

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*

ಮಾರ್ಚ್ 30, 2026

*ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 30, 2026

*ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*

ಮಾರ್ಚ್ 30, 2026

*ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*

ಮಾರ್ಚ್ 30, 2026

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.