ಮಡಿಕೇರಿ NEWS DESK ಆ.6 : ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದ ಹಾನಿಯಾದ ಮನೆಗಳಿಗೆ ಟಾರ್ಪಲ್, ಆಹಾರ ಸಾಮಾಗ್ರಿ ಕಿಟ್ ಹಾಗೂ ಸ್ವಚ್ಛತಾ ಸಾಮಾಗ್ರಿಗಳನ್ನು ಗ್ರಾಮ ಪಂಚಾಯತಿ ವಿಪತ್ತು ನಿರ್ವಹಣಾ ಕಾರ್ಯಪಡೆ ವತಿಯಿಂದ ವಿತರಿಸಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಹೆಚ್.ಎ ಹಂಸ, ಉಪಾಧ್ಯಕ್ಷ ಅನುರಾಧ, ಸದಸ್ಯರು, ಪಿಡಿಒ ಅಬ್ದುಲ್ಲ, ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ಪಾಟೀಲ್ ಹಾಗೂ ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.








