ವಿರಾಜಪೇಟೆ NEWS DESK ಆ.6 : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆ ತಾಲ್ಲೂಕು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಸ್ಪರ್ಧೆಯ ಸಂಚಾಲಕ ಎಂ.ಎ ಕೃಷ್ಣ ತಿಳಿಸಿದ್ದಾರೆ. ವಿರಾಜಪೇಟೆ ಭೌಗೋಳಿಕ ತಾಲ್ಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ನವ ಭಾರತ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದಲ್ಲಿ ಸ್ಪರ್ಧೆ ನಡೆಯಲಿದ್ದು, ಒಂದು ಶಾಲೆಯಿಂದ ಒಂದು ವಿದ್ಯಾರ್ಥಿ ಮತ್ತು ಒಂದು ವಿಧ್ಯಾರ್ಥಿನಿಗೆ ಮಾತ್ರ ಅವಕಾಶವಿರುತ್ತದೆ. ಕನ್ನಡ ಭಾಷೆಯಲ್ಲಿ ಮಾತ್ರ ಭಾಷಣ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಂದ ವ್ಯಾಸಾಂಗ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸ್ಪರ್ಧೆಗೆ ಗರಿಷ್ಠ 3 ನಿಮಿಷ ಮಾತ್ರ ಅವಕಾಶವಿರುತ್ತದೆ. ಸಿದ್ದಾಪುರದ ವಿರಾಜಪೇಟೆ ರಸ್ತೆಯ ಸೆಂಟನರಿ ಚರ್ಚ್ ಹಾಲ್ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದ್ದು, ಆ.12 ರ ಒಳಗಾಗಿ ವಿದ್ಯಾರ್ಥಿಗಳ ಹೆಸರನ್ನು ನೊಂದಾಯಿಸಬೇಕು. ಆ.14 ರಂದು ಮದ್ಯಾಹ್ನ ವಿದ್ಯಾರ್ಥಿಗಳಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9731783149, 9902048577, 9886813225 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.