ಪ್ಯಾರಿಸ್ NEWS DESK ಆ.6 : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ವಿನೀಶ್ ಫೋಗಾಟ್ (Vinesh Phogat)ಅವರು ಫೈನಲ್ ಪ್ರವೇಶಿಸಿದ್ದಾರೆ. ಇಂದು ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಅವರು ಕ್ಯೂಬಾದ ಗುಸ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸಿದರು. ಈ ಸಾಧನೆಯಿಂದ ವಿನೀಶ್ ಫೋಗಾಟ್ ಒಲಿಂಪಿಕ್ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.