ಗ್ರಾ.ಪಂ ಸದಸ್ಯ ಕೊಳಂಬೆ ಸುಭಾಶ್ ಮಾತನಾಡಿ ಹಿಂದಿನ ಕಾಲದಲ್ಲಿ ನಾವು ಶಾಲೆಯಲ್ಲಿ ವ್ಯಾಸಾಂಗ ಮಾಡುವ ಸಂದರ್ಭ ಇಂತಹ ಸೌಲಭ್ಯ ಇರಲಿಲ್ಲ. ಇಂದಿನ ಕಾಲದಲ್ಲಿ ಸರಕಾರಿ ಶಾಲೆಗಳಲ್ಲಿ ಸಮವಸ್ತ್ರ, ಊಟ, ಕ್ಷೀರ ಭಾಗ್ಯ, ಆರೋಗ್ಯ ತಪಾಸಣೆ, ದಾನಿಗಳಿಂದ ಉಚಿತ ನೋಟ್ ಪುಸ್ತಕ, ಕ್ರೀಡಾ ಸಾಮಗ್ರಿ ಎಲ್ಲಾವನ್ನು ನೀಡುತ್ತಿದೆ. ಆದರೆ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಇಳಿಮುಖಗೊಳ್ಳುತ್ತಿರುವುದು ವಿಷಾದನೀಯ ಎಂದ ಅವರು, ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಲು ಹೆಚ್ಚಿನ ಆಸಕ್ತಿ ತೋರಬೇಕೆಂದು ಮನವಿ ಮಾಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಮಾತನಾಡಿ, ಪೋಷಕರು ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಶಾಲೆಗಳಿಗೆ ಕಳುಹಿಸಲಾಗುತ್ತಿದ್ದು, ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ದೇಶದ ಉತ್ತಮ ಪ್ರಜೆಗಳಾಗಿ ಮೂಡಬೇಕೆಂದು ಕರೆ ನೀಡಿದರು.ಈ ಸಂದರ್ಭ ಮುಖ್ಯ ಶಿಕ್ಷಕರಾದ ಮೂರ್ತಿ ಶಾಲೆಯ ಮೂಲಭೂತ ಸೌಲಭ್ಯಗಳ ಬಗ್ಗೆ ಮನವಿಮಾಡಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನಾಥ್, ಶಿಕ್ಷಕಿ ಜಿ.ಕೆ.ಪಾರ್ವತಿ, ಸುಜಾತ, ಸುಮಿತ್ರ ಹಾಗೂ ಇತರರು ಹಾಜರಿದ್ದರು.