ಮಡಿಕೇರಿ ಆ.7 NEWS DESK : ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಶಾಲಾ ಕಾಲೇಜುಗಳ ಪಠ್ಯ ವಿಷಯಗಳಲ್ಲಿ ‘ಸಹಕಾರ’ ವಿಷಯ ಅಳವಡಿಕೆ’ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಬಳಕೆ ಮತ್ತು ತಾಂತ್ರಿಕತೆ ಅಳವಡಿಕೆಯಿಂದ ಮಾತ್ರವೇ ಸಹಕಾರಿ ಚಳುವಳಿ ಬಲ್ಯಾಡ್ಯಗೊಳ್ಳಬಲ್ಲದು’ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆ ನಡೆಯಿತು. ಕೊಡಗು ಜಿಲ್ಲಾ ಸಹಕಾರಯೂನಿಯನ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧವನ್ನು ಮಂಡಿಸಿದರು. ನಂತರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಚರ್ಚಾ ಸ್ಪರ್ಧೆ ಕಾಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎನ್.ಎ. ರವಿ ಬಸಪ್ಪ ವಹಿಸಿದ್ದರು. ಚರ್ಚಾ ಸ್ಪರ್ಧೆಯ ತೀರ್ಪುಗಾರರಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ, ಯೂನಿಯನ್ ನಿರ್ದೇಶಕ ಕೆ.ಎಂ.ತಮ್ಮಯ್ಯ, ಕೆ.ಐ.ಸಿ.ಎಂ.ನ ಪ್ರಾಂಶುಪಾಲರಾದ ಡಾ. ಆರ್,ಎಸ್, ರೇಣುಕಾ ಹಾಗೂ ಪ್ರಬಂಧ ಪತ್ರಿಕೆಯ ಮೌಲ್ಯಮಾಪಕರಾಗಿ ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ. ಶ್ಯಾಮಲಾ ನಿರ್ವಹಿಸಿದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎನ್.ಎ. ಮಾದಯ್ಯ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಪ್ರಬಂಧ ಸ್ಪರ್ಧೆ ವಿಜೇತರು :
ಪ್ರಥಮ ಹೆಚ್.ಎಸ್.ನೇತ್ರ ಮೂರ್ನಾಡು ಸರ್ಕಾರಿ ಪ್ರೌಢಶಾಲೆ, ದ್ವಿತೀಯ ಎಂ.ಎನ್.ಪ್ರೇರಣ ಸಂತ ಜೋಸೆಫರ ಪ್ರೌಢಶಾಲೆ ಮಡಿಕೇರಿ, ತೃತೀಯ ಎ.ಬಿ.ಕೃತಿಕ ಜ್ಞಾನಜ್ಯೋತಿ ವಿದ್ಯಾಸಂಸ್ಥೆ ಮೂರ್ನಾಡು,
ಸಮಾದಾನಕರ ಬಹುಮಾನ ಮೊಹಮ್ಮದ್ ಉಮರ್ ಸಾದ್, ಮೌಲಾನಾ ಆಜಾದ್ ಮಾದರಿ ಶಾಲೆ, ಕುಶಾಲನಗರ
ಚರ್ಚಾ ಸ್ಪರ್ಧೆ ವಿಜೇತರು :
ಪ್ರಥಮ ಹೆಚ್.ಎ.ಮಾನ್ಯ ವಿವೇಕಾನಂದ ಪದವಿಪೂರ್ವ ಕಾಲೇಜು ಕುಶಾಲನಗರ, ದ್ವಿತೀಯ ಅದ್ವಿಕ, ಲಯನ್ಸ್ ಪದವಿಪೂರ್ವ ಕಾಲೇಜು ಗೋಣಿಕೊಪ್ಪಲು, ತೃತೀಯ ಬನಿತ್ ಬೋಜಣ್ಣ ಸಂತ ಜೋಸೆಫರ ಪದವಿಪೂರ್ವ ಕಾಲೇಜು ಮಡಿಕೇರಿ, ಸಮಾದಾನಕರ ಬಹುಮಾನ ಎ.ವಿಪಿನ್ ಕಾವೇರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪಲು