ವಿರಾಜಪೇಟೆ ಆ.7 NEWS DESK : ವಿರಾಜಪೇಟೆಯ ಟೆಕ್ವಾಂಡೋ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಕರ್ನಾಟಕ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಬಸವೇಶ್ವರ ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಕೂರ್ಗ್ ಪಬ್ಲಿಕ್ ಸ್ಕೂಲ್ ನ ಆರನೇ ತರಗತಿ ವಿದ್ಯಾರ್ಥಿನಿ ಪಟ್ಟಡ ಕಾಂಚನ ಎರಡು ಚಿನ್ನ, ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿಗಳಾದ ಅಖಿಲೇಶ್, ಎಸ್.ಪಿ.ಸಂಜಯ್ ಹಾಗೂ ದಿಲನ್, ಕಾಲ್ಸ್ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಎಸ್.ವಿಹಾನ್, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಿದ್ಯಾರ್ಥಿಗಳಾದ ರುಹಾನ್, ದನ್ಯತಾ, ನಿಯೋನ್ ಜೋಸೆಫ್ ಒಂದು ಚಿನ್ನ ಮತ್ತು ಒಂದು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಇವರು ತರಬೇತಿ ಕೇಂದ್ರದ ಮಾಸ್ಟರ್ ಅರುಣ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.