ಸೋಮವಾರಪೇಟೆ ಆ.8 NEWS DESK : ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ತಹಶೀಲ್ದಾರ್ ನವೀನ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು ಮತ್ತು ವಿವಿಧ ಇಲಾಖಾಧಿಕಾರಿಗಳು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ವಭಾವಿ ಸಭೆಗಳಿಗೆ ಬಹುತೇಕ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸದೆ ತಮ್ಮ ಇಲಾಖೆಯ ಸಿಬ್ಬಂದಿಗಳನ್ನು ಕಳುಹಿಸುತ್ತಿರುವ ಕುರಿತು ಅಸಮಾಧಾನ ವ್ಯಕ್ತವಾಯಿತು. ಪೊಲೀಸ್ ಇಲಾಖೆಯವರು ಪಥಸಂಚಲನದ ನೇತೃತ್ವವನ್ನು ವಹಿಸುವಂತೆ ತೀರ್ಮಾನಿಸಲಾಯಿತು. ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ತಲಾ ಈರ್ವರು ವಿದ್ಯಾರ್ಥಿಗಳನ್ನು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಾಗು ಸರ್ಕಾರಿ ಇಲಾಖೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ಗೌರವಿಸಲು ತೀರ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಗು ಅಗ್ನಿಶಾಮಕ ದಳದ ವತಿಯಿಂದ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ತಹಶೀಲ್ದಾರ್ ತಿಳಿಸಿದರು. ಸಭೆಯಲ್ಲಿ ಗ್ರೇಡ್ 2 ತಹಸೀಲ್ದಾರ್ ಶ್ರೀಧರ್, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.









