ಸುಂಟಿಕೊಪ್ಪ ಆ.8 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣೆ ವತಿಯಿಂದ ಆಟೋ ಮತ್ತು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಮಾತನಾಡಿ, ಆಟೋ ಚಾಲಕರು ಮತ್ತು ವಾಹನ ಚಾಲಕರುಗಳು ರಸ್ತೆ ಸುರಕ್ಷತೆಯ ದಿಸೆಯಲ್ಲಿ ವಾಹನಗಳಲ್ಲಿ ಮಿತಿಗಿಂತ ಅಧಿಕ ಜನರನ್ನು ಕರೆದೋಯ್ಯವ ಸಂದರ್ಭದಲ್ಲಿ ಅವಘಡಗಳು ಸಂಭವಿಸಿದರೆ ಅಪರಾಧವಾಗುತ್ತದೆ. ಅಲ್ಲದೆ ವಿಮೆಪಡೆದುಕೊಳ್ಳಲು ಕಷ್ಟಸಾಧ್ಯವಾಗುತ್ತದೆ. ವಾಹನಗಳನ್ನು ಚಲಾಯಿಸುವಾಗ ರಸ್ತೆಯ ನಿಯಮಗಳನ್ನು ಚಾಲಕರು ಕಟ್ಟುನಿಟ್ಟಾಗಿ ಪಾಲಿಸಬೇಕು, ಅತೀಯಾದ ವೇಗದ ಚಾಲನೆಗೆ ಕಡಿವಾಣ ಹಾಕಬೇಕು ಮತ್ತು ಅಪಘಾತಗಳನ್ನು ತಡೆಯಬಹುದಾಗಿದೆ. ವಾಹನಗಳನ್ನು ಚಲಾಯಿಸುವ ಸಂದರ್ಭ ಪ್ರತಿಯೊಬ್ಬ ಚಾಲಕರು ಚಾಲಕರಿಗೆ ನೀಡಲಾಗಿರುವ ಪರವನಾಗಿ, ವಿಮೆ, ವಾಹನದ ದಾಖಲಾತಿಗಳನ್ನು ಕಡ್ಡಾಯವಾಗಿ ತಮ್ಮ ಬಳಿ ಇರಿಕೊಳ್ಳುವುದು, ಕಾಲಕ್ಕೆ ಅದನ್ನು ನವೀಕರಿಸಿಕೊಬೇಕು ಎಂದರು. ಆಟೋ ಮತ್ತು ವಾಹನಗಳಲ್ಲಿ ಶಾಲಾ ಮಕ್ಕಳನ್ನು ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೋಯ್ಯಬಾರದು. ಪ್ರಯಾಣಿಕರಿಂದ ದುಪ್ಪಟ್ಟು ಬಾಡಿಗೆ ವಸೂಲಾತಿ ಮಾಡುವುದು, ಸಮವಸ್ತ್ರ ಧರಿಸದೆ ಮತ್ತು ವಾಹನ ನಿಲುಗಡೆ ನಿಷೇಧಿತ ಪ್ರದೇಶದಲ್ಲಿ ನಿಲ್ಲಿಸುವುದ್ದರಿಂದ ಕಾನೂನು ಉಲ್ಲಂಘನೆ ಅಡಿಯಲ್ಲಿ ಅಪರಾಧ ದಂಡವನ್ನು ಚಾಲಕರು ತೆರಬೇಕಾಗುತ್ತದೆ ಎಂದು ಶ್ರೀಧರ್ ಚಾಲಕರಿಗೆ ಮನವರಿಕೆ ಮಾಡಿದರು. ಈ ಸಂದರ್ಭ ಎ.ಎಸ್.ಐ.ಸುರೇಶ್, ಆಟೋಚಾಲಕರ ಸಂಘದ ಅಧ್ಯಕ್ಷ ಸಿ.ಸಿ.ಸುನಿಲ್‍ಕುಮಾರ್, ಸಿಬ್ಬಂದಿಗಳು, ಆಟೋ ಮತ್ತು ವಾಹನ ಚಾಲಕರು ಹಾಜರಿದ್ದರು.