ಮಡಿಕೇರಿ ಆ.8 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಐ ಮತ್ತು ಎಂಎಲ್ ವಿಭಾಗದ ವತಿಯಿಂದ ಕಾರ್ಗಿಲ್ ವಿಜಯ ದಿವಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಅಮರ್ ಜವಾನ್ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಇಂಜಿನಿಯರ್‍ಗಳು ರಕ್ಷಣಾ ಇಲಾಖೆಯಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದು ಇಸ್ರೇಲ್ ದೇಶದ ಉದಾಹರಣೆಯೊಂದಿಗೆ ವಿವರಿಸಿದರು. ಅಲ್ಲದೆ ಹೇಗೆ ರಕ್ಷಣಾ ಇಲಾಖೆಯು ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿದೆ ಎಂಬುದನ್ನು ತಿಳಿಸಿದರು. ಇಂದಿನ ಯುವ ಇಂಜಿನಿಯರ್ ಗಳು ಕೃತಕ ಬುದ್ದಿಮತ್ತೆಯನ್ನು ಬಳಸಿ ಹೊಸ ಅವಿಷ್ಕಾರಗಳನ್ನು ನಡೆಸಿ ದೇಶದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಬೇಕೆಂದು ಕಿವಿ ಮಾತನ್ನು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರಾಕೇಶ್ ಪೂವಯ್ಯ ಮಾತನಾಡಿ, ದೇಶದ ಭದ್ರತೆಗೆ ಸೈನಿಕರ ಪಾತ್ರವು ಬಹು ಮುಖ್ಯವಾಗಿದೆ. ರಕ್ಷಣಾ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಪಾತ್ರ, ವಿದ್ಯಾರ್ಥಿಗಳು ಕೃತಕ ಬುದ್ದಿಮತ್ತೆಯನ್ನು ಬಳಸಿ ದೇಶದ ರಕ್ಷಣಾ ವ್ಯವಸ್ಥೆಗೆ ಸಹಕಾರಿಯಾಗುವಂತೆ ತಾಂತ್ರಿಕ ಅನ್ವೇಶಣೆಗಳನ್ನು ಮಾಡಬೇಕೆಂದು ಸಲಹೆ ನೀಡಿದರು. ದೇಶದ ರಕ್ಷಣೆಯ ವಿಷಯ ಬಂದಾಗ ನಾವೆಲ್ಲರೂ ಒಗ್ಗೂಡಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಸವರಾಜ ಮಾತನಾಡಿ, ದೇಶದ ಉನ್ನತಿಗೆ ರಕ್ಷಣಾ ವ್ಯವಸ್ಥೆ ಮತ್ತು ತಂತ್ರಜ್ಞಾನ ಎರಡು ಬಹು ಮುಖ್ಯ ಎಂದರು.
ಕಾರ್ಯಕ್ರಮದಲ್ಲಿ ಸಿ.ಐ.ಟಿ ಪ್ರಾಧ್ಯಾಪಕ ವೃಂದ, ಬೋಧಕೇತರ ವೃಂದದವರು ಹಾಗೂ ವಿವಿಧ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು. ಆರ್ಟಿಫಿಶಿಯಲ್ ಇಂಟೆಲಿಜನ್ಸ್ ಮತ್ತು ಮಶಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥ ಡಾ. ಬಿ.ಬಿ.ರಾಮಕೃಷ್ಣ ಸ್ವಾಗತಿಸಿದರು. ಪ್ರೊ. ಟಿ.ವಿ.ವಿಘ್ನೇಶ್ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಎಐ ಮತ್ತು ಎಂಎಲ್ ವಿಭಾಗದ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*