ಮಡಿಕೇರಿ ಆ.8 NEWS DESK : ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆ.9 ರಂದು ಕುಶಾಲನಗರದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ ಮತ್ತು ದೇಶ ಭಕ್ತಿಗೀತೆ ಹಾಡುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಇರುವ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಖಾಸಗಿ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಕಾರ್ಯದರ್ಶಿ ಎಸ್.ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.