ವಿರಾಜಪೇಟೆ ಆ.8 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ವತಿಯಿಂದ ಕೆದಮುಳ್ಳೂರು ವ್ಯಾಪ್ತಿಯ ತೋರ ಗ್ರಾಮದ ಕಾಳಜಿ ಕೇಂದ್ರದಲ್ಲಿರುವ ಮೂವತ್ತು ಮಂದಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ತಾಲ್ಲೂಕು ಯೋಜನಾಧಿಕಾರಿ ದಿನೇಶ್, ಒಕ್ಕೂಟದ ಅಧ್ಯಕ್ಷ ಅರುಣ್ ಕುಮಾರ್, ಪ್ರಭುಕುಮಾರ್ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು.