ಮಡಿಕೇರಿ NEWS DESK ಆ.8: ಹಾಸನದ ಖಾಸಗಿ ಸುದ್ಧಿವಾಹಿನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನೋರ್ವನ ಮೃತದೇಹ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಹರದೂರು ಹೊಳೆಯಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆ ಪ್ರಕರಣವೆಂದು ಶಂಕಿಸಲಾಗಿದೆ. ಹಾಸನದ ಕದಲಿ ಗ್ರಾಮದ ನಿವಾಸಿ ಹೇಮಂತ್ (27) ಮೃತ ವ್ಯಕ್ತಿ. ಹೇಮಂತ್ ಬುಧವಾರ ನಾಪತ್ತೆಯಾಗಿರುವ ಬಗ್ಗೆ ಅವರ ತಂದೆ ಪದ್ಮರಾಜ್ ಅವರು ಹಾಸನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಇಂದು ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಹೊಳೆಯ ಬದಿಯಲ್ಲಿ ಹೇಮಂತ್ ಅವರಿಗೆ ಸೇರಿದ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆೆ ಹುಡುಕಾಟ ನಡೆಸಿದಾಗ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.