ಸಂಟಿಕೊಪ್ಪ ಆ.9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಶಿರಂಗಾಲ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಮಾಡಿದರು.
ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಕಾನ್ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದ ವತಿಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಂಗಾಲ ಮಹಿಳಾ ಸ್ವ ಸಹಾಯ ಸಂಘಗಳಾದ ಸಪ್ತಪದಿ, ಪ್ರಗತಿ, ಭದ್ರಕಾಳಿ ಹಾಗೂ ಈಶ್ವರಿ ಸ್ವಸಹಾಯ ಸಂಘದ ಸದಸ್ಯರುಗಳು ಶಿರಂಗಾಲ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳೆದಿದ್ದ ಗಿಡ ಗಂಟಿಗಳನ್ನು ಕಡಿದು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿದರು.
ಸ್ವಚ್ಛತಾ ಶ್ರಮದಾನಕ್ಕೆ ದೇವಾಲಯದ ಸಮಿತಿಯ ಅಧ್ಯಕ್ಷ ಡಿ.ಎನ್.ಧರ್ಮಪ್ಪ ಚಾಲನೆ ನೀಡಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಭವ್ಯ, ಸೇವಾ ಪ್ರತಿನಿಧಿ ಯಶೋಧ, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಇದ್ದರು.










