ನಾಪೋಕ್ಲು ಆ.9 NEWS DESK : ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಶ್ರಾವಣ ಶನಿವಾರ ಪೂಜಾ ಕಾರ್ಯಕ್ರಮಗಳು ಆ.10 ರಿಂದ 31 ರವರೆಗೆ ನಡೆಯಲಿವೆ.
ಆ ದಿನಗಳಂದು ಬೆಳಿಗ್ಗೆ ಏಳು ಗಂಟೆಗೆ ಅಭಿಷೇಕ, 11 ಗಂಟೆಯಿಂದ 12 ಗಂಟೆವರೆಗೆ ಸೇವೆಯ ಸಂಕಲ್ಪ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನದಾನ ನೆರವೇರಿಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯ ಪಾಲ್ಗೊಳ್ಳುವಂತೆ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ : ದುಗ್ಗಳ ಸದಾನಂದ.









