
ವಿರಾಜಪೇಟೆ ಆ.9 NEWS DESK : ಹೆಗ್ಗಳ ಗ್ರಾಮದಲ್ಲಿರುವ ಪಾಲ್ಟ್ ಮಕ್ಕಿ ನಾಗಬನದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅರ್ಚಕರು ಸಂಕಲ್ಪ, ಹಾಲಿನ ಮತ್ತು ಸೀಯಾಳ ಅಭಿಷೇಕ, ಕುಂಕುಮಾರ್ಚನೆ ಸೇವೆಗಳನ್ನು ನೆರವೇರಿಸಿ ನಾಗ ತಂಬಿಲವನ್ನು ಮಾಡಿದರು. ಶ್ರೀ ನಾಗ ಮೂರ್ತಿಗೆ ವಿಶೇಷ ಅಲಂಕಾರ ಸೇವೆಯನ್ನು ಸಲ್ಲಿಸಿದರು. ನಂತರ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಪ್ರಧಾನ ಅರ್ಚಕ ವೇಣುಗೋಪಾಲ್ ಭಟ್ ರವರ ನೇತೃತ್ವದಲ್ಲಿ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.









