ವಿರಾಜಪೇಟೆ ಆ.9 NEWS DESK : ನಾಗರಪಂಚಮಿಯ ಪ್ರಯುಕ್ತ ಬೇಟೋಳಿ ಗ್ರಾಮದ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದ ಶ್ರೀ ನಾಗ ಗುಡಿಯಲ್ಲಿ ನಾಗ ತಂಬಿಲ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು. ದೇವಾಲಯದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಅವರ ನೇತೃತ್ವದಲ್ಲಿ ಶ್ರೀ ಮಹಾಗಣಪತಿ, ಪುದುಪಾಡಿ ಅಯ್ಯಪ್ಪ ಸ್ವಾಮಿ ಹಾಗೂ ವನದುರ್ಗೆ ದೇವರುಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ನಾಗ ದೇವರ ಗುಡಿಯಲ್ಲಿ ಸಂಕಲ್ಪ ಪೂಜೆ, ಹಾಲಿನ ಅಭಿಷೇಕ ಹಾಗೂ ಸೀಯಾಳ ಅಭಿಷೇಕ, ನಾಗ ತಂಬಿಲ ಸೇವೆ ಹೂವಿನ ವಿಶೇಷ ಅಲಂಕಾರ ಹಾಗೂ ಪುಷ್ಪಾರ್ಚನೆ, ಕುಂಕುಮಾರ್ಚನೆ ಸೇವೆ ನೆರವೇರಿತು. ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಾಗದೇವರಿಗೆ ಹಾಲಿನ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.










