ಮೈಸೂರು NEWS DESK ಆ.9 : ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿ ಕೂಟ ನಡೆಸುತ್ತಿರುವ ಮೈಸೂರು ಚಲೋ 7ನೇ ದಿನದ ಪಾದಯಾತ್ರೆ ಇಂದು ಸಂಜೆ ಅರಮನೆ ನಗರಿ ಮೈಸೂರು ತಲುಪಿತು. ಆಗಸ್ಟ್ 10 ರ ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ಪಾದಯಾತ್ರೆಯ ಸಮಾರೋಪ ಸಮಾವೇಶ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿರೋಧ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಸಿ.ಎನ್.ಅಶ್ವಥ್ ನಾರಾಯಣ್, ಸಂಸದ ಯುಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಶ್ರೀರಾಮುಲು, ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಸಿ.ಬಿ.ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.