
ಮಡಿಕೇರಿ ಆ.10
NEWS DESK : ಸ್ಟಾಫ್ ಸೆಲೆಕ್ಷನ್ ಕಮಿಷನ್ ಭಾರತ ಸರ್ಕಾರ ಇವರು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ಶೀಘ್ರಲಿಪಿಗಾರರು ಗ್ರೇಡ್ ‘ಸಿ’ ಮತ್ತು ‘ಡಿ’ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 17 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಪಿಯುಸಿ ಅಥವಾ ತತ್ಸಮಾನ ಉತ್ತೀರ್ಣರಾಗಿ, ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಯೋಮಿತಿ: ಸ್ಟೆನೋಗ್ರಾಫರ್ ಗ್ರೇಡ್ “ಸಿ” 01.08.2024ರಂತೆ 18 ರಿಂದ 30 ವರ್ಷಗಳು, ಸ್ಟೆನೋಗ್ರಾಫರ್ ಗ್ರೇಡ್ “ಡಿ “01.08.2024ರಂತೆ 18 ರಿಂದ 27 ವರ್ಷಗಳು, ಖಾಲಿ ಹುದ್ದೆಗಳ ಸಂಖ್ಯೆ: 2,006, ಶುಲ್ಕ ಪಾವತಿ ವಿಧಾನ: ಆನ್‍ಲೈನ್/ ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬಹುದಾಗಿದೆ. ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ -2ಎ, 2ಬಿ, 3ಎ, 3ಬಿ, ಗೆ ಸೇರಿದ ಪುರುಷ ಅಭ್ಯರ್ಥಿಗಳಿಗೆ ರೂ.100. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪಿ.ಡಬ್ಯ್ಲೂ.ಡಿ/ಇ.ಎಸ್.ಎಮ್/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ: https://ssc.gov.inನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ.

