ಮಡಿಕೇರಿ ಆ.10 NEWS DESK : ಕೇಂದ್ರ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಶಾಮುಕ್ತ ಭಾರತ ಅಭಿಯಾನ ಪ್ರಾರಂಭವಾಗಿ 5 ನೇ ವರ್ಷದ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಆಗಸ್ಟ್ 12 ಬೆಳಗ್ಗೆ 9 ಗಂಟೆಗೆ ಎಲ್ಲಾ ಶಾಲಾ ಕಾಲೇಜುಗಳು, ಮಹಾವಿದ್ಯಾಲಯಗಳು, ತಾಂತ್ರಿಕ, ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ, ಐಐಟಿಸ್, ಐಐಎಂಎಸ್, ಪಾಲಿಟೆಕ್ನಿಕ್ ಕಾಲೇಜುಗಳು, ಪ್ಯಾಷನ್ ಇನ್ಸಿಟ್ಯೂಟ್ಸ ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸುವುದು.
ಶೈಕ್ಷಣಿಕ ಸಂಸ್ಥೆಗಳಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು, ಮಾದಕ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿಚಾರಗೋಷ್ಠಿ ಮತ್ತು ಕಾರ್ಯಗಾರ ಮತ್ತು ರ್ಯಾಲಿ, ಮ್ಯಾರಥಾನ್ ಬೀದಿ ನಾಟಕಗಳನ್ನು ಆಯೋಜಿಸುವುದು. ಶಾಲಾ ಕಾಲೇಜು ಆವರಣಗಳಲ್ಲಿ ನಶಾ ಮುಕ್ತ ಭಾರತ ಅಭಿಯಾನದ ನೆನಪಿನ ಪ್ರಯುಕ್ತ ಸಸಿ ನೆಡುವುದು. ನಶಾಮುಕ್ತ ಭಾರತ್ ಅಭಿಯಾನದ ಎಲ್ಲಾ ಕಾರ್ಯಕ್ರಮಗಳನ್ನು ಕಚೇರಿ, ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳು, ವಸತಿ ನಿಲಯ, ಸಮುದಾಯದಲ್ಲಿ ಹಾಗೂ ಸಂಘ ಸಂಸ್ಥೆಗಳಲ್ಲಿ ಅಯೋಜಿಸುವ ಪ್ರತಿಜ್ಞೆ ಸ್ವೀಕರಿಸುವ ಮೂಲಕ ಕೇಂದ್ರ ಸರ್ಕಾರದ ನಶಾಮುಕ್ತ ಭಾರತ್ ಅಭಿಯಾನ ಯೋಜನೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.