ಸುಂಟಿಕೊಪ್ಪ ಆ.10 NEWS DESK : ಜಿಲ್ಲೆಯಾದ್ಯಂತ ನಾಗಾರಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊಡಗರಹಳ್ಳಿಯಲ್ಲಿರುವ ಶ್ರೀ ಬೈತೂರಪ್ಪ, ಪೊವ್ವೆದಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಇರುವ ನಾಗಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತವಾಗಿ ವಿಶೇಷ ಪೂಜೆ ನಡೆಯಿತು. ದೇವಾಲಯದ ಮುಖ್ಯ ಆರ್ಚಕರಾದ ನರಸಿಂಹಭಟ್, ಸಹಾರ್ಚಕರಾದ ರಾಮಶರ್ಮ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣ್ಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಖಜಾಂಚಿ ಡಾ.ತಮ್ಮಯ್ಯ, ಟ್ರಸ್ಟಿಗಳು, ದೇವಾಲಯ ಪಾರುಪಾತ್ಯದಾರ ಅಕ್ಕಪಂಡ ರಾಜೇಂದ್ರ ಸೇರಿದಂತೆ ನೂರಾರು ಭಕ್ತಾಧಿಗಳು ಶೃದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು. ಸುಂಟಿಕೊಪ್ಪ ಪನ್ಯ ಗ್ರಾಮದ ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವಾಲಯದಲ್ಲಿ ಹಾಗೂ ಪಟ್ಟಣ ವ್ಯಾಪ್ತಿಯ ವಿವಿಧ ದೇವಾಲಯ ದೇವಾಲಯಗಳಲ್ಲಿ ನಾಗಾರಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ನಾಗನ ಕಲ್ಲಿಗೆ ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*