ಮಡಿಕೇರಿ ಆ.10 NEWS DESK : ಈ ವರ್ಷದಲ್ಲಿ ಇಲ್ಲಿಯವರೆಗೆ 20,566ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿ ಸಿಕೊಳ್ಳಬೇಕಾಗಿದೆ.
ಭಾರತದಲ್ಲಿ, ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಬ್ಯಾಂಕ್ಗಳು ತನ್ನ ಉದ್ಯೋಗಿಗಳಿಗೆ ಸುಂದರವಾದ ಪ್ಯಾಕೇಜ್ಗಳು, ಆಕರ್ಷಕ ಸಂಬಳ, ಉದ್ಯೋಗ ಭದ್ರತೆಯ ಜೊತೆಗೆ ಇತರ ಸವಲತ್ತುಗಳನ್ನು ನೀಡುತ್ತವೆ ಎಂಬುದು ಬಹಿರಂಗ ಸತ್ಯವಾಗಿದೆ.
ಪ್ರತಿ ವರ್ಷ ದೇಶದಾದ್ಯಂತ ವಿವಿಧ ಬ್ಯಾಂಕ್ಗಳು ಮತ್ತು ಪರೀಕ್ಷಾ ಏಜೆನ್ಸಿಗಳು ನಡೆಸುವ ಬಹು ಬ್ಯಾಂಕ್ ಪರೀಕ್ಷೆಗಳಿವೆ.ಇಂತಹ ಕಾರಣಗಳಿಂದಾಗಿ ಬ್ಯಾಂಕ್ ಉದ್ಯೋಗಗಳನ್ನ ಪಡೆದುಕೊಳ್ಳಲು ಪೈಪೋಟಿ ಅತ್ಯಂತ ವೇಗದಲ್ಲಿ ಹೆಚ್ಚುತ್ತಿದೆ. ಆಕಾಂಕ್ಷಿಗಳು ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಮತ್ತು ಬ್ಯಾಂಕ್ ಉದ್ಯೋಗಿಯಾಗಿ ಆಯ್ಕೆಯಾಗಲು ಸರಿಯಾದ ತಯಾರಿಯನ್ನು ಹೊಂದಿರಬೇಕು ಎಂಬುದನ್ನು ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಸ್ಸಂಖ್ಯೆ ಸೂಚಿಸುತ್ತದೆ. ಒಂದು ಕಾಲದಲ್ಲಿ ಕಾಮರ್ಸ್ ಪದವಿ ಓದಿದವರು ಕೃಷಿ ಪದವಿ ಅಧ್ಯಯನ ಮಾಡಿದವರಿಗಷ್ಟೇ ಬ್ಯಾಂಕಗಳಲ್ಲಿ ಉದ್ಯೋಗ ಎನ್ನುವಂತಿತ್ತು. ಆದರೆ, ಈಗ ಇವೆರಡರ ಜೊತೆಗೆ, ಕಾನೂನು, ಎಂಜಿನಿಯರಿಂಗ್, ಮಾರ್ಕೆಟಿಂಗ್, ಮ್ಯಾನೇಜ್ಮೆಂಟ್ ಸೇರಿದಂತೆ ಬೇರೆ ಬೇರೆ ವಿಷಯಗಳಲ್ಲಿ ಪದವಿ ಪಡೆದಿರುವವರಿಗೂ ಬ್ಯಾಂಕ್ ಉದ್ಯೋಗ ಕೈಬೀಸಿ ಕರೆಯುತ್ತಿದೆ. ಇಂಥ ವಿಶೇಷ ಪದವಿಗಳೊಂದಿಗೆ ಕೆಲಸದ ಅನುಭವವಿರುವನ್ನು ವಿಶೇಷ ಅಧಿಕಾರಿ (ಸ್ಪೆಷಲಿಸ್ಟ್ ಆಫೀಸರ್) ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್- ಐಬಿಪಿಎಸ್) ದೇಶದ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಇಂಥ ಸ್ಪೆಷಲ್ ಆಫೀಸರ್ಸಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಗಾಗ್ಗೆ ನೇಮಕ ಮಾಡಿಕೊಳ್ಳುತ್ತಿರುತ್ತದೆ. ಅದರಂತೆ ಈ ವರ್ಷವೂ ದೇಶದ ಐದು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ 896 ಸ್ಪೆಷಲ್ ಆಫೀಸರ್ಸ್ ನೇಮಕ ಮಾಡಿಕೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದೆ.
ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ 21 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಆನ್ಲೈನ್ ಮೂಲಕ (https://www.ibps.in) ಅರ್ಜಿ ಸಲ್ಲಿಸಬೇಕು. ಎಲ್ಲ ಹುದ್ದೆಗಳು ಸ್ಕೇಲ್ -1 ಅಧಿಕಾರಿ ಹಂತದ ಹುದ್ದೆಗಳಾಗಿವೆ.
ಯಾವ್ಯಾವ ಹುದ್ದೆಗಳು : ಯಾವ್ಯಾವ ಬ್ಯಾಂಕ್ ಗಳಲ್ಲಿ ಹುದ್ದೆ : ಐಟಿ ಆಫೀಸರ್, ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್, ರಾಜ್ಭಾ ಷಾ ಅಧಿಕಾರಿ, ಲಾ ಆಫೀಸರ್, ಹೆಚ್‍ಆರ್/ಪರ್ಸನಲ್ ಆಫೀಸರ್, ಮಾರ್ಕೆಟಿಂಗ್ ಆಫೀಸರ್
ಬ್ಯಾಂಕ್ ಆಫ್ ಇಂಡಿಯಾ 5-10,
ಇಂಡಿಯನ್ ಒವರಸೀಸ್ ಬ್ಯಾಂಕ್ 20, 15, 5
uco bank- 36
Canara bk – 5
ಪಂಜಾಬ್ ನ್ಯಾಷನಲ್ ಬ್ಯಾಂಕ್ – 150, 310, 25, 100, 15, 200
total : 170 346 25 125 25 205
ಅರ್ಜಿ ಶುಲ್ಕ : ಸಾಮಾನ್ಯ , ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: 850. ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಯೋಧರಿಗೆ 175. ನೋಂದಣಿ ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕದ ಜೊತೆಯಲ್ಲಿ ಇಂಟಿಮೇಷನ್ ಶುಲ್ಕಗಳನ್ನು ಅಭ್ಯರ್ಥಿಯು ಭರಿಸಬೇಕಾಗುತ್ತದೆ.
ವಯೋಮಿತಿ: 01.08.2024 ಕ್ಕೆ ಕನಿಷ್ಠ 20 ವರ್ಷ ಹಾಗೂ ಗರಿಷ್ಡ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.08.1994 ಕ್ಕಿಂತ ಮುಂಚಿತವಾಗಿ ಮತ್ತು 01.08.2004ರ ನಂತರ ಜನಿಸಿರಬಾರದು. ಸರ್ಕಾರದ ನಿಯಮಾನುಸಾರ ಎಸ್.ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳಷ್ಟು ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ನೇಮಕಾತಿ ಪ್ರಕ್ರಿಯೆ: ಮೂರು ಹಂತಗಳಲ್ಲಿ ನೇಮಕಾತಿ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಇರಲಿದೆ. ಎರಡೂ ಲಿಖಿತ ಪರೀಕ್ಷೆಗಳೂ ಆನ್ಲೈನ್ ಮೂಲಕ ನಡೆಯಲಿವೆ. ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾದವರು, ಮುಖ್ಯ ಪರೀಕ್ಷೆಗೆ ಹಾಜರಾಗಬೇಕು. ಮುಖ್ಯ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ತಪ್ಪು ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನವಿದೆ. ಪರೀಕ್ಷೆಗಳು ಇಂಗ್ಲಿಷ್/ ಹಿಂದಿ ಭಾಷೆಯಲ್ಲಿರಲಿದೆ.
ನೆನಪಿಡಿ: ಒಬ್ಬ ಅಭ್ಯರ್ಥಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ವೆಬ್ ಲಿಂಕ್: https://www.ibps.in/index.php/specialist-officers-xiv/https:/ಹಾಗೂ ಅಧಿಸೂಚನೆಗೆ:www.ibps.in
ಪರೀಕ್ಷಾ ಪ್ರಕ್ರಿಯೆ: ಮೊದಲನೇ ಹಂತ? : ಪೂರ್ವಬಾವಿ ಪರೀಕ್ಷೆ. ಇದು ಈ ವರ್ಷದ ನವೆಂಬರ್ ನಲ್ಲಿ ನಡೆಯಲಿದೆ.
ಎರಡನೇ ಹಂತ ? ಮುಖ್ಯ ಪರೀಕ್ಷೆ. ಇದು ಡಿಸೆಂಬರ್ ನಲ್ಲಿ ನಿಗದಿಯಾಗಿದೆ.
ಮೂರನೇ ಹಂತ ? ಸಂದರ್ಶನ – 2025 ರ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ.
ಪರೀಕ್ಷಾ ಕೇಂದ್ರಗಳು: ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್): ಬೆಂಗಳೂರು, ಬೆಳಗಾವಿ, ಧಾರವಾಡ, ಕಲಬುರಗಿ, ಹುಬ್ಬಳ್ಳಿ- ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
ಮುಖ್ಯ ಪರೀಕ್ಷೆ: ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು
ಶೈಕ್ಷಣಿಕ ಅರ್ಹತೆ: (21.08.2024 ಕ್ಕೆ ಅನ್ವಯಿಸುವಂತೆ)
1) ಐಟಿ ಆಫೀಸರ್ ಹುದ್ದೆಗೆ : ಕಂಪ್ಯೂಟರ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯಕ್ಕೆ ಸಂಬಂಧಿಸಿದ ನಾಲ್ಕು ವರ್ಷಗಳ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು ಅಥವಾ ಸ್ನಾತಕೋತ್ತ ರ ಪದವಿ ಪಡೆದಿರಬೇಕು ಅಥವಾ ಪದವಿ ಜೊತೆಯಲ್ಲಿ ಆಔಇಂಅಅ “ಃ” ಲೆವೆಲ್ ಪರೀಕ್ಷೆ ಪಾಸಾಗಿರಬೇಕು.
2) ಅಗ್ರಿಕಲ್ಬ ರಲ್ ಫೀಲ್ಡ್ ಆಫೀಸರ್: ಕೃಷಿ/ತೋಟಗಾರಿಕೆ / ಪಶುಸಂಗೋಪನೆ,/ ಪಶು ವೈದ್ಯಕೀಯ ವಿಜ್ಞಾನ/ ಡೇರಿ ಸೈನ್ಸ್/ ಅಗ್ರಿ ಎಂಜಿನಿಯರಿಂಗ್/ ಮೀನುಗಾರಿಕೆ ವಿಜ್ಞಾನ/ ಮೀನು ಸಾಕಣೆ, ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ /ಅರಣ್ಯ / ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯ ವಹಾರ ನಿರ್ವ ಹಣೆ/ ಆಹಾರ ತಂತ್ರಜ್ಞಾನ/ ಡೇರಿ ತಂತ್ರಜ್ಞಾನ / ಕೃಷಿ ಎಂಜಿನಿಯರಿಂಗ್/ ರೇಷ್ಮೆ ಕೃಷಿ/ ಮೀನುಗಾರಿಕೆ ಎಂಜಿನಿಯರಿಂಗ್ ನಾಲ್ಕು ವರ್ಷಗಳ ಪದವಿ ಪಡೆದಿರಬೇಕು.
3) ಲಾ ಆಫೀಸರ್: ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು ಮತ್ತು ಬಾರ್ ಕೌನ್ಸಿಲ್ನ ಸದಸ್ಯ ತ್ವ ಪಡೆದಿರಬೇಕು.
4) ರಾಜ್ಯ ಭಾಷಾ ಅಧಿಕಾರಿ ಹುದ್ದೆಗೆ: ಹಿಂದಿಯಲ್ಲಿ ಸ್ನಾತಕೋತ್ತ ರ ಪದವಿ, ಜೊತೆಗೆ – ಪದವಿಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು ಅಥವಾ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಪದವಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ವಿಷಯವಾಗಿ ಅಭ್ಯಾಸ ಮಾಡಿರಬೇಕು.
5) ಎಚ್ ಆರ್ / ಪರ್ಸನಲ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಪರ್ಸನಲ್ ಮ್ಯಾನೇಜ್ಮೆಂಟ್/ಇಂಡಸ್ಟ್ರಿಯಲ್ ರಿಲೇಷನ್ಸ್ ಎಚ್‍ಆರ್/ ಎಚ್ ಆರ್ಡಿ / ಸೋಷಿಯಲ್ ವರ್ಕ್/ ಕಾರ್ಮಿಕ ಕಾನೂನು ಇದ್ಯಾವುದಾದರೂ ವಿಷಯದಲ್ಲಿ ಪೂರ್ಣಾವಧಿಯ ಸ್ನಾತಕೋತ್ತರ ಪದವಿ ಅಥವಾ ಪೂರ್ಣಾವಧಿಯ ಸ್ನಾತಕೋತ್ತರ ಅಥವಾ ಡಿಪೆÇ್ಲಮಾ ಮಾಡಿರಬೇಕು.
6)ಮಾರ್ಕೆಟಿಂಗ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಎರಡು ವರ್ಷಗಳ ಪೂರ್ಣಾವಧಿ ಎಂಎಂಎಸ್ (ಮಾರ್ಕೆಟಿಂಗ್) ಎಂಬಿಎ (ಮಾರ್ಕೆಟಿಂಗ್)/ PGDBA /PGDBM/PGPM/PGDM ಮಾರ್ಕೆಟಿಂಗ್ ನಲ್ಲಿ ಸ್ಪೆಷಲೈಸೇಷನ್ ಮಾಡಿರಬೇಕು.
ಗಮನಿಸಿ: IT ಆಫೀಸರ್ ಸ್ಕೇಲ್-I ಹೊರತುಪಡಿಸಿ ಬೇರೆ ಹುದ್ದೆಗಳಿಗೆ: ಅಭ್ಯರ್ಥಿಯು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರ ವನ್ನು ಕೂಡ ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ.
ಕ್ರೆಡಿಟ್ ಇತಿಹಾಸ:
(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್ ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.
(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ ಅIಃIಐ ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (ಓಔಅ)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.
ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.
ನೇಮಕ ಹೇಗೆ?
ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು,(ಪ್ರತಿ ಪತ್ರಿಕೆಗೂ 40 ನಿಮಿಷಗಳಂತೆ ಒಟ್ಟಾರೆ 120 ನಿಮಿಷಗಳು) 125 ಅಂಕಗಳಿಗೆ 150 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದರಲ್ಲಿ ಇಂಗ್ಲೀಷ್ ಲಾಂಗ್ವೇಜ್ ಗೆ 50, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಗೆ 50 ಹಾಗೂ ರೀಸನಿಂಗ್ ಎಬಿಲಿಟಿಯ 50 ಪ್ರಶ್ನೆಗಳಿರಲಿವೆ.( ಇದು ರಾಜ್ಭಾಷಾ ಅಧಿಕಾರಿ ಹಾಗೂ ಲಾ ಆಫೀಸರ್ ಹುದ್ದೆಗಳಿಗೆ ಹೊರತಾಗಿ.ಇವೆರಡೂ ಹುದ್ದೆಗಳಿಗೆ ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಪರೀಕ್ಷೆ ಬದಲಾಗಿ General Awareness with Special Reference to Banking Industry 50 ಪ್ರಶ್ನೆಗಳಿರಲಿವೆ.)
ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.(ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆಗಿಂತ 10 ಪಟ್ಟು ಹೆಚ್ಚು ಅಭ್ಯರ್ಥಿಗಳನ್ನ ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡುವುದರಿಂದ 1:10 ಅನುಪಾತ)
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಮುಖ್ಯ ಪರೀಕ್ಷೆಯು, ನಿಗದಿತ ದಿನದಂದು ಆನ್ ಲೈನ್ನಲ್ಲಿಯೇ ಪರೀಕ್ಷೆ ನಡೆಯಲಿವೆ. ಮುಖ್ಯ ಪರೀಕ್ಷೆಯು ವೃತ್ತಿಪರ ಜ್ಞಾನಕ್ಕೆ ಸಂಭಂದಿಸಿದ್ದು 45 ನಿಮಿಷಗಳ ಕಾಲ ನಡೆಯಲಿದ್ದು, 60 ಪ್ರಶ್ನೆಗಳನ್ನು 60 ಅಂಕಗಳಿಗೆ ಕೇಳಲಾಗುತ್ತದೆ.(ರಾಜ ಭಾಷಾ ಅಧಿಕಾರಿಗಳ ಹುದ್ದೆಗಳಿಗೆ ಡಿಸ್ಕೃಪ್ಟಿವ್ ಟೆಸ್ಟ್ ಎರಡು ಹಂತಗಳಲ್ಲಿ ನಡೆಯಲಿದ್ದು ವೃತ್ತಿಪರ ಜ್ಞಾನಕ್ಕೆ ಸಂಭಂದಿಸಿದ 45 ಪ್ರಶ್ನೆ ಒಬ್ಜೆಕ್ಟಿವ್ ಮಾದರಿಯಲ್ಲಿದ್ದು,ವ್ತತ್ತಿಪರ ಜ್ಞಾನಕ್ಕೆ ಸಂಬಂದಿಸಿದಂತೆ ಇನ್ನೊಂದು ಡಿಸ್ಕ್ರೆಪ್ಟಿವ್ ಪತ್ರಿಕೆಯಲ್ಲಿ ಎರಡು ಪ್ರಶ್ನೆಗಳಿರಲಿದ್ದು ಅವಧಿ ಎರಡೂ ಪರೀಕ್ಷೆಗೆ 30 ನಿಮಿಷಗಳಂತೆ ಒಟ್ಟಾರೆ ಒಂದು ಗಂಟೆಯ ಅವಧಿ ನೀಡಲಾಗಿದ್ದು. ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿಯೇ ಉತ್ತರವನ್ನು ಬರೆಯಬೇಕು.
ಗಮನಿಸಿ: ಈ ಹಿಂದಿನಂತೆ ಇದ್ದ ಮುಖ್ಯ ಪರೀಕ್ಷೆಯಲ್ಲಿ ಬದಲಾವಣೆ ಮಾಡಿದ್ದು ಈ ಸಲ ವೃತ್ತಿಪರ ಜ್ಞಾನದ ಪರೀಕ್ಷೆ ಬರೆಯಬೇಕು .(ಸ್ಪೇಶಲಿಸ್ಟ್ ಹುದ್ದೆಗಳಾಗಿರೋದರಿಂದ) ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಇರುತ್ತದೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯಕ್ಕೆ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ.
ಬಾಕ್ಸ್: ಕನ್ನಡದಲ್ಲಿ ಪರೀಕ್ಷೆ ನಡೆಯೊಲ್ಲ.
ಮುಖ್ಯ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ. ಇವುಗಳಿಗೆ ಬೇಕಾಗುವ ಕನಿಷ್ಠ ಅರ್ಹತಾ ಅಂಕಗಳನ್ನು ಬ್ಯಾಂಕ್ ನಿರ್ಧರಿಸುತ್ತದೆ. ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಸಂದರ್ಶನ (100 ಅಂಕಗಳು) ಬ್ಯಾಂಕ ನಡೆಸಲಿವೆ. ಸಂದರ್ಶನದ ಸಂದರ್ಭದಲ್ಲಿ ‘ಒಬಿಸಿ’ ವರ್ಗದ ಅಡಿಯಲ್ಲಿ ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ‘ಕೆನೆರಹಿತ ಪದರ'(‘Non-Creamy layer’) ಷರತ್ತನ್ನು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ. ಒಬಿಸಿ ಎಂದು ನೋಂದಾಯಿಸಿ ಕೊಂಡಿರುವ ಆದರೆ (”Non-Creamy layer)’ಕೆನೆರಹಿತ ಪದರ’ ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. EWS ವರ್ಗದ ಅಡಿಯಲ್ಲಿ ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ ಇWS ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. EWS ಎಂದು ನೋಂದಾಯಿಸಿಕೊಂಡ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅಂತವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.
ಆಯ್ಕೆ ಪಟ್ಟಿ:
ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ- II ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು.ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು (ಹಂತ- 2), ವಸ್ತುನಿಷ್ಠ ಪರೀಕ್ಷೆ ಮತ್ತು ವಿವರಣಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹಾಗೂ ಹಂತ-3 ರಲ್ಲಿ ಪಡೆದ ಅಂಕಗಳಿಗೆ ಸೇರಿಸಲಾಗುತ್ತದೆ. ಅರ್ಹತೆ ಪಟ್ಟಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ (ಹಂತ -1) ಪಡೆದ ಅಂಕಗಳನ್ನು ಪರಿಗಣಿಸುವುದಿಲ್ಲ. ಹಂತ-2 ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು (60 ಅಂಕಗಳನ್ನು 100 ಕ್ಕೆ ಪರಿವರ್ತನೆ ಮಾಡಿ) ಅದರ 80% ಅಂಕಗಳು ಮತ್ತು ಅಭ್ಯರ್ಥಿಗಳ ಹಂತ-3 ರಲ್ಲಿ ಪಡೆದ ಅಂಕಗಳನ್ನು (100 ಅಂಕಗಳಲ್ಲಿ) ಅದರ 20% ಅಂಕಗಳನ್ನು ಸೇರಿಸಿ(100 ರಲ್ಲಿ) ಪರಿವರ್ತಿತ ಅಂಕಗಳನ್ನು ಒಟ್ಟು ಸೇರಿಸಿ ನಂತರ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುತ್ತದೆ. ಹಂತ-2 ಮತ್ತು ಹಂತ- 3 ರಲ್ಲಿ ಉನ್ನತ ಶ್ರೇಣಿಯನ್ನು ಪಡೆದ ಪ್ರತಿ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆ ಮಾಡಲಾಗುವುದು.
ಮಾಹಿತಿ : ಆರ್.ಕೆ.ಬಾಲಚಂದ್ರ, ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು.