ಮಡಿಕೇರಿ NEWS DESK ಆ.11 : ವಿಶ್ವದೆಲ್ಲೆಡೆ ಹಿಂದೂಗಳನ್ನು ಸಂಘಟಿಸುವ ಕಾರ್ಯದಲ್ಲಿ ಸಕ್ರಿಯವಾಗಿರುವ ವಿಶ್ವ ಹಿಂದು ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯಾಲಯದ ನೂತನ ಭವನ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಂಡಿತು.
ಉದ್ಘಾಟನಾ ಸಮಾರಂಭದಲ್ಲಿ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆರ್ಟ್ ಆಫ್ ಲೀವಿಂಗ್ನ ಶ್ರೀ ರವಿಶಂಕರ ಗುರೂಜಿ ಸಾನ್ನಿಧ್ಯ ವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಹಾಗೂ ವಿಶ್ವ ಹಿಂದೂ ಪರಿಷದ್ ನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಬೆಂಗಳೂರಿನ ಚಾಮರಾಜಪೇಟೆ ಶಂಕರಮಠದ ಸಮಾನಾಂತರ ರಸ್ತೆಯಲ್ಲಿರುವ ವಿಹಿಂಪ ಕಚೇರಿ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಯಾಲಯದ ಕಟ್ಟಡಕ್ಕೆ “ಧರ್ಮಶ್ರೀ” ಎಂದು ನಾಮಕರಣ ಮಾಡಲಾಗಿದೆ.
ದೇಶ, ಧರ್ಮ, ಸಂಸ್ಕೃತಿ, ಸಂಸ್ಕಾರದ ಪ್ರಚಾರಕ್ಕಾಗಿ ಜಗತ್ತಿನಾದ್ಯಂತ ಇರುವ ಹಿಂದುಗಳನ್ನು ಸಂಘಟಿಸುವ ಕಾರ್ಯದಲ್ಲಿ ತೊಡಗಿರುವ ವಿಶ್ವ ಹಿಂದು ಪರಿಷದ್ ನ ವಿವಿಧ ವಿಭಾಗಗಳು ನೂತನ ಭವನ “ಧರ್ಮಶ್ರೀ” ಯಲ್ಲಿ ಕಾರ್ಯನಿರ್ವಸಲಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೊಡಗು ಜಿಲ್ಲೆಯ ವಿಹೆಚ್ಪಿ ಪ್ರಮುಖರು ತಿಳಿಸಿದರು.