


ಕೂಡಿಗೆ NEWS DESK ಆ.12 : ತೊರೆನೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕ ಅಳುವಾರ ಹಾಲು ಉತ್ಪಾದಕರ ಸಹಕಾರ ಸಂಘದ 2024-29ನೇ ಸಾಲಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಿ ಎ.ಎನ್.ಮಂಜುನಾಥ್, ಉಪಾಧ್ಯಕ್ಷರಾಗಿ ಮೋಹನ್ ಅವಿರೋಧವಾಗಿ ಆಯ್ಕೆಯಾದರು. 13 ಮಂದಿ ನಿರ್ದೇಶಕರ ಪೈಕಿ 9 ಮಂದಿ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಚುನಾವಣಾಧಿಕಾರಿಯಾಗಿ ಜಿಲ್ಲಾ ಸಹಕಾರ ಸಂಘದ ಅಧಿಕಾರಿ ಮೋಹನ್ ಕಾರ್ಯನಿರ್ವಹಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪರವಾಗಿ ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ, ಸಹಕಾರ ಸಂಘದ ಮಾಜಿ ನಿರ್ದೇಶಕ ಕೆ.ಎಸ್.ಕೃಷ್ಣೇಗೌಡ, ಕೆ.ಡಿ.ಪಿ.ಸದಸ್ಯ ಟಿ. ಬಿ.ಜಗದೀಶ್ ಮತ್ತಿತರರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭ ಸಂಘದ ನಿರ್ದೇಶಕರಾದ ಬಿ.ಜೆ.ಶಿವಪ್ಪ, ಎ.ಪಿ.ರಂಗಸ್ವಾಮಿ, ಲೋಕೇಶ್ ಎ.ಆರ್, ಎ.ಎಚ್.ಶಿವಶಂಕರ್, ಸಿ.ಡಿ.ಸ್ವಾತಿ, ಜಯಮ್ಮ, ಡಿ.ಆರ್.ಪ್ರೇಮಕುಮಾರ್ ಮತ್ತಿತರರು ಇದ್ದರು. (ವರದಿ : ಎನ್.ಆರ್.ಶೆಟ್ಟಿ)








