ಮಡಿಕೇರಿ ಆ.13 NEWS DESK : 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ನಡೆಯಿತು. ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ನಂತರ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಈ ಸಂದರ್ಭ ಶಾಲೆಯ ಅಧ್ಯಕ್ಷರಾದ ಗೀತಾ ಚಂಗಪ್ಪ, ಗೌರವ ಕಾರ್ಯದರ್ಶಿ ಆಶಾ ಸುಬ್ಬಯ್ಯ, ಮುಖ್ಯೋಪಾಧ್ಯಾಯ ಶಿವರಾಜ್, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.










