ಮಡಿಕೇರಿ ಆ.14 NEWS DESK : ಮಡಿಕೇರಿ ನಗರದ ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷರಾಗಿ ಸತತ 27 ನೇ ಬಾರಿಗೆ ಕೆ.ಹೆಚ್.ಚೇತನ್ ಪುನರ್ ಆಯ್ಕೆಯಾಗಿದ್ದಾರೆ. 46ನೇ ವರ್ಷದ ಗಣೇಶೋತ್ಸವವನ್ನು ಅದ್ದೂರಿಯಾಗಿ ನಡೆಸಲು ಸಂಘ ನಿರ್ಧರಿಸಿದೆ. ನಗರದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಯೋಗೇಶ್ ಕುಮಾರ್, ಸಹಕಾರ್ಯದರ್ಶಿಯಾಗಿ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಗಳಾಗಿ ಸತೀಶ್ ರೈ, ಲೋಕೇಶ್ ರೈ, ಖಜಾಂಚಿಯಾಗಿ ಪ್ರಮೋದ್ ರಾಜ, ಸಹ ಖಜಾಂಚಿಯಾಗಿ ಪ್ರದೀಪ್ ಕುಟ್ಟಪ್ಪ ಹಾಗೂ ಇತರ ಉಪ ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 46ನೇ ವರ್ಷದ ಗಣೇಶೋತ್ಸವವನ್ನು 15 ದಿನಗಳ ಕಾಲ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಜ್ರಂಭಣೆಯಿಂದ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಗಣೇಶೋತ್ಸವ ಪ್ರಯುಕ್ತ ಪ್ರತಿದಿನ ರಾತ್ರಿ 8 ಗಂಟೆಗೆ ಮಹಾಪೂಜೆಯ ನಂತರ ಭಜನೆ ಕಾರ್ಯಕ್ರಮ ಹಾಗೂ ಸೆ.15 ರಂದು ಸಾರ್ವಜನಿಕರಿಗಾಗಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೂತನ ಪದಾಧಿಕಾರಿಗಳು ಮನವಿ ಮಾಡಿದರು.
:: ಗಣೇಶೋತ್ಸವ ::
ಸೆ.7 ರಂದು ಬೆಳಿಗ್ಗೆ 11 ಗಂಟೆಗೆ ಶಾಂತಿನಿಕೇತನ ಬಡಾವಣೆಯಲ್ಲಿ ಗಣಪತಿ ಹೋಮದೊಂದಿಗೆ ಶ್ರೀಮಹಾಗಣಪತಿಯ ಪ್ರತಿಷ್ಠಾಪನೆ ಮತ್ತು ಮಹಾಪೂಜೆ ನಡೆಯಲಿದೆ. ಸೆ.19 ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗಪೂಜೆ, ಸೆ.21 ರಂದು ಮಹಾಪೂಜೆಯ ನಂತರ ನಗರದಲ್ಲಿ ಶ್ರೀಮಹಾಗಣಪತಿ ಮೂರ್ತಿಯ ಶೋಭಾಯಾತ್ರೆ ಸಾಗಲಿದೆ. ಈ ಬಾರಿ “ಲೋಕ ಕಲ್ಯಾಣಕ್ಕಾಗಿ ಮಯೂರೇಶನಿಂದ ಸಿಂಧು ದೈತ್ಯ ರಾಜನ ಸಂಹಾರ” ಎಂಬ ಕಥಾವಸ್ತುವನ್ನು ಅಳವಡಿಸಿಕೊಳ್ಳಲಾಗುತ್ತಿದೆ.