ಯಾವ ಬ್ಯಾಂಕ್, ಎಷ್ಟು ಹುದ್ದೆ…?
ಕೆನರಾ ಬ್ಯಾಂಕ್ 750, ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ 360, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2000, ಬ್ಯಾಂಕ್ ಆಫ್ ಇಂಡಿಯಾ 885 ಪಂಜಾಬ್ ನ್ಯಾಷನಲ್ ಬ್ಯಾಂಕ್ 200, ಇಂಡಿಯನ್ ಒವರಸೀಸ್ ಬ್ಯಾಂಕ್ 260,ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.
ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಈ ಲಿಂಕ್ಗಳನ್ನು ನೋಡಬಹುದು: www.ibps.in ªÀÄvÀÄÛ https://www.ibps.in/index.php/management-trainees-xiv/
ಶೈಕ್ಷಣಿಕ ಅರ್ಹತೆ: (21.08.2024 ಕ್ಕೆ ಅನ್ವಯಿಸುವಂತೆ) ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.
ವಯೋಮಿತಿ: 01.08.2024 ಕನಿಷ್ಠ 20 ವರ್ಷ ಹಾಗೂ ಗರಿಷ್ಡ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.08.1994 ಕ್ಕಿಂತ ಮುಂಚಿತವಾಗಿ ಮತ್ತು 01.08.2004ರ ನಂತರ ಜನಿಸಿರಬಾರದು. ಸರ್ಕಾರದ ನಿಯಮಾನುಸಾರ ಎಸ್.ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳಷ್ಟು ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ , ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: ?850. ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಯೋಧರಿಗೆ ?175. ನೋಂದಣಿ ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕ/ಇಂಟಿಮೇಷನ್ ಶುಲ್ಕಗಳನ್ನು ಹಾಗೂ ಆನ್ಲೈನ್ ಪಾವತಿಗಾಗಿ ಬ್ಯಾಂಕ್ ವಹಿವಾಟು ಶುಲ್ಕಗಳನ್ನು ಅಭ್ಯರ್ಥಿಯು ಭರಿಸಬೇಕಾಗುತ್ತದೆ.
ಶುಲ್ಕಪಾವತಿ: ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.
ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹ ರಾಗಿರುವುದಿಲ್ಲ. ಅವರು ಆನ್ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆ ಪದ ರಹಿತ (Non creamy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರ ವನ್ನು ಹೊಂದಿರಬೇಕು.
ಪರೀಕ್ಷಾ ಪ್ರಕ್ರಿಯೆ: ಇದೇ ಅಕ್ಟೋಬರ್ ನಲ್ಲಿ ಪೂರ್ವ ಭಾವಿ ಪರೀಕ್ಷೆ, ನವೆಂಬರ್ ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ಎರಡೂ ಪರೀಕ್ಷೆಗಳು ಆನ್ಲೈನ್ನಲ್ಲಿ ನಡೆಯುಲಿವೆ. ಸಂದರ್ಶನ 2025 ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ. ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವ ಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರ ಗಳು: ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್): ಬೆಂಗಳೂರು,ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ- ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
ಮುಖ್ಯ ಪರೀಕ್ಷೆ: ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಕಲಬುರಗಿ ಮಂಗಳೂರು ಪೂರ್ವ ಭಾವಿ ಪರೀಕ್ಷೆಗೆ ತರಬೇತಿ: ಐಬಿಪಿಎಸ್ ವತಿಯಿಂದ ಎಸ್.ಸಿ/ಎಸ್.ಟಿ/ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳು, ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಕೋರಿಕೆ ಸಲ್ಲಿಸಬೇಕು. ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ಮತ್ತು ಮೈಸೂರಿನಲ್ಲಿ ಉಚಿತ ಪರೀಕ್ಷಾ ತರಬೇತಿಯನ್ನೂ ಸೆಪ್ಟೆಂಬರ್ ತಿಂಗಳಲ್ಲಿ ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.
ಕ್ರೆಡಿಟ್ ಇತಿಹಾಸ:
(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (ಅಡಿeಜiಣ ಊisಣoಡಿಥಿ) ಹೊಂದಿರಬೇಕು. ಬ್ಯಾಂಕ್ ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (ಅIಃIಐ)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.
(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.
ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.
ಅರ್ಜಿ ಸಲ್ಲಿಸುವಾಗ ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯ ತೆಯ ಆದೇಶವನ್ನು ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್ ಗಳ ಆದ್ಯತೆಯ ಕ್ರಮವನ್ನು ಅಗತ್ಯ ವಾಗಿ ಸೂಚಿಸಬೇಕು. ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾ ಗುವುದಿಲ್ಲ. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯ ನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿಸಲ್ಲಿಸುವಾಗ ಬಹಳ ಎಚ್ಚರಿಕೆ ವಹಿಸುವುದು ಒಳಿತು.
ಆಫೀಸರ್ಸ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ:
ನೇಮಕಾತಿ ಪ್ರಕ್ರಿಯೆ:
ಪೂರ್ವ ಭಾವಿ ಪರೀಕ್ಷೆ:
ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕು. ಆದರೆ ಒಟ್ಟಾರೆ ಹೆಚ್ಚು ಅಂಕಗಳಿಸುವುದು ಮುಖ್ಯ . ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆ ಅವಧಿಯದ್ದು (ಪ್ರತಿ ಪತ್ರಿಕೆಗೂ 20 ನಿಮಿಷಗಳು). 100 ಅಂಕಗಳಿರುತ್ತವೆ (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿ) ಇದರಲ್ಲಿ ಇಂಗ್ಲಿಷ್ ಭಾಷಾ ಪತ್ರಿಕೆಗೆ 30, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಗೆ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತವೆ. ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯದ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕ ವನ್ನು ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ. ಪ್ರಶ್ನೆಗೆ ಉತ್ತರ ಗುರುತಿಸಲಾಗಿಲ್ಲದಿದ್ದರೆ ಅಂಕ ಕಳೆಯುವುದಿಲ್ಲ. ಮುಖ್ಯ ಪರೀಕ್ಷೆ ಮುಗಿಯುತ್ತಿದ್ದಂತೆ ಇಂಗ್ಲಿಷ್ ಭಾಷೆಗೆ (Letter Writing & Essay- with two questions) ಸಂಬಂಧಿಸಿದಂತೆ 25 ಅಂಕಗಳಿಗೆ ಡಿಸ್ಸ್ಕ್ರಿಟಿವ್ ಟೆಸ್ಟ್ ನಡೆಸಲಾಗುತ್ತದೆ. ಅವಧಿ 30 ನಿಮಿಷಗಳು. ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿಯೇ ಉತ್ತರ ಬರೆಯಬೇಕು. ಇಂಗ್ಲಿಷ್ ಭಾಷೆಯ ವಿವರಣಾತ್ಮಕ ಪೇಪರ್ (ಪತ್ರ ಬರವಣಿಗೆ ಮತ್ತು ಪ್ರಬಂಧ) ಅನ್ನು ಸ್ವಯಂಚಾಲಿತ ಸ್ಕೋರಿಂಗ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಬರವಣಿಗೆಯ ಪ್ರಾವೀಣ್ಯಕ್ಕೆ ಸಂಬಂಧಿಸಿದಂತೆ ವೈಶಿಷ್ಟಗಳನ್ನು ಗುರುತಿಸುವುದು ಇದರ ಕಾರ್ಯ ವಿಧಾನವಾಗಿದೆ. ಆಂಗ್ಲ ಭಾಷೆಯಲ್ಲಿ ಹಾಗೂ ಬರವಣಿಗೆಯಲ್ಲಿ ಪರೀಕ್ಷೆ ಬರೆಯುವವರ ಪ್ರಾವೀಣ್ಯವನ್ನು ವಸ್ತುನಿಷ್ಠ ರೀತಿಯಲ್ಲಿ ಮೌಲ್ಯಮಾಪನ ಮಾಡುವ ವಿಶಿಷ್ಟ ವಿಧಾನವಾಗಿದೆ.
ನೆನಪಿಡಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಈ ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತ ಸಂದರ್ಶನಕ್ಕೆ ಅರ್ಹರಾಗುತ್ತಾರೆ.
ಹಂತ-III ಸಂದರ್ಶನ.
ಆಯ್ಕೆ ಪಟ್ಟಿ: ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಮತ್ತು ಹಂತ-III ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಸಂದರ್ಶನಕ್ಕೆ ನಿಗದಿ ಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಶೇ.40 (Sಅ/Sಖಿ/ಔಃಅ/PWಃಆ ಅಭ್ಯರ್ಥಿಗಳಿಗೆ ಶೇ 35).
ಪರೀಕ್ಷೆ ಕುರಿತು ಇನ್ನಷ್ಟು ವಿವರಗಳಿಗಾಗಿ www.ibps.in ಮತ್ತು https://www.ibps.in/index.php/management-trainees-xiv/
ಜಾಲ ತಾಣ ನೋಡಿ.
ಮಾಹಿತಿ : ಆರ್.ಕೆ.ಬಾಲಚಂದ್ರ.
ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು.