



ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣವಾಗಿ ಜರುಗಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಏರ್ ಮಾರ್ಷಲ್ (ನಿ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಇತರರು ಪಾಲ್ಗೊಂಡಿದ್ದರು. ಮಳೆಯ ಸಿಂಚನದ ನಡುವೆಯೂ ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಕುರಿತು ನೃತ್ಯ ಪ್ರದರ್ಶನ ನೀಡಿದ್ದು ವಿಶೇಷವಾಗಿತ್ತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಜವಹರಲಾಲ್ ನೆಹರು, ಡಾ.ಬಿ.ಆರ್.ಅಂಬೇಡ್ಕರ್ ಹೀಗೆ ಸ್ವಾತಂತ್ರ್ಯ ಕ್ಕಾಗಿ ಹೊರಾಟ ಮಾಡಿದ ಮಹನೀಯರು ಹಾಗೂ ರಾಷ್ಟ್ರದ ಸೇನಾ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸೇರಿದಂತೆ ಹಲರನ್ನು ಸ್ಮರಿಸಿದ್ದು ಗಮನ ಸೆಳೆಯಿತು. ಸ್ವಾತಂತ್ರ್ಯ ದಿನಾಚರಣೆಯು ಅರ್ಥಪೂರ್ಣ ಹಾಗೂ ವೈವಿದ್ಯತೆಯಿಂದ ಕೂಡಿದ್ದು ವಿಶೇಷವಾಗಿತ್ತು.








