ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಒಳ ರೋಗಿಗಳ ವಿಭಾಗದಲ್ಲಿ ದಾಖಲಾಗಿರುವ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಡೀನ್ ಡಾ.ವಿಶಾಲ್ ಕುಮಾರ್, ಡಾ.ನಂಜುಂಡಯ್ಯ ಇತರರು ಇದ್ದರು.